IND vs WI T20: ರೋಹಿತ್ ಜೊತೆ ಮತ್ತೊಬ್ಬ ಓಪನರ್ ಯಾರು?: ಮೊದಲ ಟಿ20ಗೆ ಭಾರತ ಸಂಭಾವ್ಯ ಪ್ಲೇಯಿಂಗ್ XI | India likely playing 11 for 1st T20I vs West Indies this batter open alongside Rohit Sharma

India’s likely playing 11 for 1st T20I: ಏಕದಿನ ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದ ರೋಹಿತ್ ಶರ್ಮಾ ತಂಡಕ್ಕೆ ಮರಳಿದ್ದು ನಾಯಕತ್ವದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಇವರ ಜೊತೆಗೆ ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ದಿನೇಶ್ ಕಾರ್ತಿಕ್ ಕೂಡ ತಂಡಕ್ಕೆ ಮರಳಿದ್ದಾರೆ. ಆದರೆ, ಕೆ.ಎಲ್. ರಾಹುಲ್ ಮತ್ತು ಕುಲ್ದೀಪ್ ಯಾದವ್ ಬಗ್ಗೆ ಇನ್ನೂ ಖಚಿತ ಮಾಹಿತಿಯಿಲ್ಲ.

Jul 29, 2022 | 9:08 AM

TV9kannada Web Team

| Edited By: Vinay Bhat

Jul 29, 2022 | 9:08 AM
ಶಿಖರ್ ಧವನ್ ನಾಯಕತ್ವದಲ್ಲಿ ವೆಸ್ಟ್​ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್​ ಸ್ವೀಪ್ ಮಾಡಿ ಸಾಧನೆ ಗೈದಿದ್ದ ಭಾರತ ತಂಡ ಇದೀಗ ಚುಟುಕು ಸಮರಕ್ಕೆ ಸಜ್ಜಾಗಿದೆ. ಇಂದು ಟ್ರಿನಿಡಾಡ್​ ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ಆಯೋಜಿಸಲಾಗಿದೆ.

ಏಕದಿನ ಸರಣಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದ ರೋಹಿತ್ ಶರ್ಮಾ ತಂಡಕ್ಕೆ ಮರಳಿದ್ದು ನಾಯಕತ್ವದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಇವರ ಜೊತೆಗೆ ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ದಿನೇಶ್ ಕಾರ್ತಿಕ್ ಕೂಡ ತಂಡಕ್ಕೆ ಮರಳಿದ್ದಾರೆ. ಆದರೆ, ಕೆ.ಎಲ್. ರಾಹುಲ್ ಮತ್ತು ಕುಲ್ದೀಪ್ ಯಾದವ್ ಬಗ್ಗೆ ಇನ್ನೂ ಖಚಿತ ಮಾಹಿತಿಯಿಲ್ಲ.

ಭಾರತದ ಟಿ20 ತಂಡದಲ್ಲಿ ಶಿಖರ್ ಧವನ್ ಇಲ್ಲದ ಕಾರಣ ರೋಹಿತ್ ಶರ್ಮಾ ಜೊತೆ ಕಣಕ್ಕಿಳಿಯುವವರು ಯಾರು ಎಂಬುದು ಕುತೂಹಲ ಕೆರಳಿಸಿದೆ. ಯಾಕೆಂದರೆ ರಾಹುಲ್ ಲಭ್ಯತೆ ಬಗ್ಗೆಯೂ ಅನುಮಾನವಿದೆ. ರಿಷಭ್ ಪಂತ್ ಓಪನರ್ ಆಗಿ ಕಣಕ್ಕಿಳಿದರೆ ಅಚ್ಚರಿ ಪಡಬೇಕಿಲ್ಲ.

ವಿರಾಟ್ ಕೊಹ್ಲಿ ಈ ಸರಣಿಯಿಂದಲೂ ವಿಶ್ರಾಂತಿ ತೆಗೆದು ಕೊಂಡಿದ್ದಾರೆ. ಹೀಗಾಗಿ ಕೊಹ್ಲಿ ಜಾಗದಲ್ಲಿ ದೀಪಕ್ ಹೂಡಾ ಅಥವಾ ಶ್ರೇಯಸ್ ಅಯ್ಯರ್ ಅವರಿಗೆ ಸ್ಥಾನ ಸಿಗುವ ಸಾಧ್ಯತೆ ಇದೆ. ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಮಧ್ಯಮ ಕ್ರಮಾಂಕದ ಬಲದವಾದರೆ ರವೀಂದ್ರ ಜಡೇಜಾ ಹಾಗೂ ದಿನೇಶ್ ಕಾರ್ತಿಕ್‌ಗೆ ಫಿನಿಶರ್ ಜವಾಬ್ದಾರಿ ಹೊರಬಹುದು.

ಆರ್‌. ಅಶ್ವಿನ್ ​ಗೆ ಆಡುವ ಬಳಗದಲ್ಲಿ ಸ್ಥಾನ ಇದೆಯೇ ಎಂಬುದನ್ನು ನೋಡಬೇಕಿದೆ. ಯಾಕೆಂದರೆ ಯುಜ್ವೇಂದ್ರ ಚಹಲ್‌, ಕುಲ್ದೀಪ್ ಯಾದವ್, ರವಿ ಬಿಷ್ಣೋಯಿ, ಜಡೇಜಾ ಸ್ಪಿನ್‌ ವಿಭಾಗದಲ್ಲಿ ಇರುವುದರಿಂದ ಅಶ್ವಿ‌ನ್​ ಗೆ ಅವಕಾಶ ಅನುಮಾನ.

ವೇಗಿಗಳಾಗಿ ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಅರ್ಶ್ ​​ದೀಪ್ ಸಿಂಗ್, ಹರ್ಷಲ್ ಪಟೇಲ್ ಇದ್ದು ಯಾರಿಗೆ ಸ್ಥಾನ ಎಂಬುದು ನೋಡಬೇಕಿದೆ.

ಭಾರತ ಸಂಭಾವ್ಯ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ರಿಷಭ್ ಪಂತ್, ದೀಪಕ್ ಹೂಡ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಅರ್ಶ್ ​​ದೀಪ್ ಸಿಂಗ್.

ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಡಿಡಿ ಸ್ಪೋರ್ಟ್ಸ್​ ನಲ್ಲಿ ನೇರಪ್ರಸಾರ ಕಾಣಲಿದೆ. ಫ್ಯಾನ್​ ಕೋಡ್ ಆ್ಯಪ್​ ನಲ್ಲಿ ಕೂಡ ಲೈವ್ ಸ್ಟ್ರೀಮ್ ವೀಕ್ಷಿಸಬಹುದು.

Most Read Stories

TV9 Kannada

Leave a Reply

Your email address will not be published. Required fields are marked *