Independence Day Parade 2022 Live Updates ಈ ಬಾರಿ ಭಾರತ 75ನೇ ವರ್ಷದ ಸ್ವಾತಂತ್ರ್ಯವನ್ನು ಆಚರಿಸುತ್ತಿದ್ದು ಇದು ಹೆಚ್ಚಿನ ಮಹತ್ವ ಹೊಂದಿದೆ. ದೇಶದಾದ್ಯಂತ ಹಬ್ಬದ ವಾತಾವರಣ ಮನೆ ಮಾಡಿದ್ದು ಎಲ್ಲೆಡೆ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿವೆ.

ಕೆಂಪು ಕೋಟೆ
LIVE NEWS & UPDATES
-
15 Aug 2022 06:39 AM (IST)
ಸ್ವಾತಂತ್ರೋತ್ಸವ ಶುಭಾಶಯ ಕೋರಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಜನತೆಗೆ ಸ್ವಾತಂತ್ರ್ಯೋತ್ಸವ ಶುಭಾಶಯ ಕೋರಿದ್ದಾರೆ. ‘ಎಲ್ಲ ದೇಶವಾಸಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು’ ಎಂದು ಮೋರಿ ಅವರು ಟ್ವೀಟ್ ಮಾಡಿದ್ದಾರೆ.
देशवासियों को #स्वतंत्रतादिवस की हार्दिक शुभकामनाएं। जय हिंद!
Greetings on this very special Independence Day. Jai Hind! #Iday2022
— Narendra Modi (@narendramodi) August 15, 2022
ಆಜಾದಿ ಕಾ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ಇಂದು (ಆಗಸ್ಟ್ 15) ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯ ಕೋಟೆಯಲ್ಲಿ ರಾಷ್ಟ್ರಧ್ವಜ ಆರೋಹಣ ಮಾಡಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಿರುವುದು ಇದು 9ನೇ ಬಾರಿ. ಈ ಬಾರಿ ಭಾರತ 75ನೇ ವರ್ಷದ ಸ್ವಾತಂತ್ರ್ಯವನ್ನು ಆಚರಿಸುತ್ತಿದ್ದು ಇದು ಹೆಚ್ಚಿನ ಮಹತ್ವ ಹೊಂದಿದೆ. ದೇಶದಾದ್ಯಂತ ಹಬ್ಬದ ವಾತಾವರಣ ಮನೆ ಮಾಡಿದ್ದು ಎಲ್ಲೆಡೆ ತ್ರಿವರ್ಣ ಧ್ವಜಗಳು ರಾರಾಜಿಸುತ್ತಿವೆ. ಶಾಲಾ ಕಾಲೇಜು ಸೇರಿದಂತೆ ಇತರ ಸಂಸ್ಥೆ, ಕಚೇರಿಗಳಲ್ಲಿ ಧ್ವಜಾರೋಹಣ ನಡೆಯಲಿದ್ದು, ಸ್ವಾತಂತ್ರ್ಯದ ಮಹತ್ವ, ಹೋರಾಟವನ್ನು ನೆನಪಿಸುವ ಹಲವಾರು ಕಾರ್ಯಕ್ರಮಗಳು ನಡೆಯಲಿವೆ. ಹೆಚ್ಚಿನ ದೇಶಗಳಂತೆ ಭಾರತವು ಕೊವಿಡ್ ಸಾಂಕ್ರಾಮಿಕದ ಛಾಯೆಯಿಂದ ಹೊರಬರುತ್ತಿರುವ ಸಮಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದೆ. ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸರ್ಕಾರವು ‘ಹರ್ ಘರ್ ತಿರಂಗ’ ಸೇರಿದಂತೆ ಹಲವಾರು ಅಭಿಯಾನಗಳನ್ನು ನಡೆಸಿದೆ.
Published On – Aug 15,2022 6:35 AM