India Covid Updates: ದೇಶದಲ್ಲಿ ಕೊರೊನಾ ಮತ್ತಷ್ಟು ಉಲ್ಬಣ, 13,313 ಹೊಸ ಪ್ರಕರಣಗಳು ಪತ್ತೆ, 38 ಸಾವು | India Records 13313 new coronavirus cases and 38 deaths in last 24 hours


ದೇಶದಲ್ಲಿ ಕೊರೊನಾ (Corona)ಪ್ರಕರಣಗಳ ಸಂಖ್ಯೆ ದಿನೇ ದಿನೆ ಉಲ್ಬಣಗೊಳ್ಳುತ್ತಿದ್ದು, ನಾಲ್ಕನೇ ಅಲೆಯ ಆತಂಕ ಎದುರಾಗಿದೆ. ಕಳೆದ 24 ಗಂಟೆಗಳಲ್ಲಿ 13,313 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 38 ಮಂದಿ ಮೃತಪಟ್ಟಿರುವ ಕುರಿತು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ

ದೇಶದಲ್ಲಿ ಕೊರೊನಾ (Corona)ಪ್ರಕರಣಗಳ ಸಂಖ್ಯೆ ದಿನೇ ದಿನೆ ಉಲ್ಬಣಗೊಳ್ಳುತ್ತಿದ್ದು, ನಾಲ್ಕನೇ ಅಲೆಯ ಆತಂಕ ಎದುರಾಗಿದೆ. ಕಳೆದ 24 ಗಂಟೆಗಳಲ್ಲಿ 13,313 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 38 ಮಂದಿ ಮೃತಪಟ್ಟಿರುವ ಕುರಿತು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬಹುತೇಕರು ಕೊರೊನಾ ಲಸಿಕೆಯ ಎರಡೂ ಡೋಸ್​ಗಳನ್ನು ಪಡೆದಿದ್ದರೆ ಇನ್ನೂ ಕೆಲವರು ಬೂಸ್ಟರ್ ಡೋಸ್​ಗಳನ್ನು ಪಡೆದಿದ್ದಾರೆ. ಸಕ್ರಿಯ ಪ್ರಕರಣಗಳು 83,990 ಇದ್ದು ಪಾಸಿಟಿವಿಟಿ ದರ ಶೇ.2.03ರಷ್ಟಿದೆ. ದೇಶದಲ್ಲಿ ಒಂದೇ ದಿನದಲ್ಲಿ 14,91,941 ಮಂದಿ ಕೊರೊನಾ ಲಸಿಕೆ ನೀಡಲಾಗಿದೆ. ಇದುವರೆಗೂ ಒಟ್ಟು 1,96,62,11,973 ಮಂದಿಗೆ ಕೊರೊನಾ ಲಸಿಕೆ ಹಾಕಲಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 524941ಕ್ಕೆ ಹೆಚ್ಚಳವಾಗಿದೆ. ಕಳೆದ 24 ಗಂಟೆಗಳಲ್ಲಿ 10,972ಮಂದಿ ಗುಣಮುಖರಾಗಿರುವುದರೊಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 42736027ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

TV9 Kannada


Leave a Reply

Your email address will not be published.