ಲಕ್ಷ್ಯ ಸೇನ್
ಭಾರತದ ಯುವ ಬ್ಯಾಡ್ಮಿಂಟನ್ ಆಟಗಾರ ಲಕ್ಷ್ಯ ಸೇನ್ ಭಾನುವಾರ ನಡೆದ ಇಂಡಿಯಾ ಓಪನ್-2022 ರ ಪುರುಷರ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ. ಫೈನಲ್ನಲ್ಲಿ ವಿಶ್ವ ಚಾಂಪಿಯನ್ ಲೋಹ್ ಕೀನ್ ಯೂ ಅವರನ್ನು 24-22, 21-17 ಸೆಟ್ಗಳಲ್ಲಿ ಸೋಲಿಸುವ ಮೂಲಕ ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ. ಈ ಪ್ರಶಸ್ತಿ ಗೆದ್ದ ಭಾರತದ ಮೂರನೇ ಪುರುಷ ಆಟಗಾರ ಲಕ್ಷ್ಯ. ಇವರಿಗಿಂತ ಮೊದಲು 1981ರಲ್ಲಿ ಪ್ರಕಾಶ್ ಪಡುಕೋಣೆ ಮತ್ತು ನಂತರ 2015ರಲ್ಲಿ ಕಿಡಂಬಿ ಶ್ರೀಕಾಂತ್ ಮೊದಲ ಸೂಪರ್ 500 ಚಾಂಪಿಯನ್ಶಿಪ್ ಪ್ರಶಸ್ತಿಯನ್ನು ಗೆದ್ದಿದ್ದರು. ಲಕ್ಷ್ಯ ಕಳೆದ ವರ್ಷವಷ್ಟೇ ವಿಶ್ವ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದು ಮಿಂಚಿದ್ದರು. ಈಗ ಈ ಶೀರ್ಷಿಕೆಯನ್ನು ತಮ್ಮ ಬ್ಯಾಗ್ನಲ್ಲಿ ಹಾಕಿಕೊಂಡಿದ್ದಾರೆ.