India T20 squad: ಟೀಮ್ ಇಂಡಿಯಾಗೆ ಹೊಸ ನಾಯಕ: ಯುವ ಪಡೆಯನ್ನು ಪ್ರಕಟಿಸಿದ ಬಿಸಿಸಿಐ | India’s squad for T20Is against New Zealand


India T20 squad: ಟೀಮ್ ಇಂಡಿಯಾಗೆ ಹೊಸ ನಾಯಕ: ಯುವ ಪಡೆಯನ್ನು ಪ್ರಕಟಿಸಿದ ಬಿಸಿಸಿಐ

Team India

ನ್ಯೂಜಿಲೆಂಡ್ ವಿರುದ್ದ ನಡೆಯಲಿರುವ ಟಿ20 ಸರಣಿಗಾಗಿ ಟೀಮ್ ಇಂಡಿಯಾವನ್ನು (Team India T2o Squad) ಪ್ರಕಟಿಸಲಾಗಿದೆ. ಭಾರತ ಟಿ20 ತಂಡದ ಹೊಸ ನಾಯಕನಾಗಿ ರೋಹಿತ್ ಶರ್ಮಾ (Rohit Sharma Captain) ಆಯ್ಕೆಯಾಗಿದ್ದಾರೆ. ಹಾಗೆಯೇ ಉಪನಾಯಕನ ಜವಾಬ್ದಾರಿ ಕೆಎಲ್ ರಾಹುಲ್ (KL Rahul) ಅವರಿಗೆ ವಹಿಸಲಾಗಿದೆ. 16 ಸದಸ್ಯರನ್ನು ಒಳಗೊಂಡಿರುವ ಈ ತಂಡದಲ್ಲಿ ವಿರಾಟ್ ಕೊಹ್ಲಿ (Virat Kohli) ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಕೊಹ್ಲಿ, ಶಮಿ, ಬುಮ್ರಾ ಸೇರಿದಂತೆ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ಇನ್ನು ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾದಲ್ಲಿ ವೆಂಕಟೇಶ್ ಅಯ್ಯರ್ ಹಾಗೂ ಅವೇಶ್ ಖಾನ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ಯುಜುವೇಂದ್ರ ಚಹಲ್, ಮೊಹಮ್ಮದ್ ಸಿರಾಜ್, ಹರ್ಷಲ್ ಪಟೇಲ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅದೇ ರೀತಿ ವಿಕೆಟ್ ಕೀಪರ್​ಗಳಾಗಿ ರಿಷಭ್ ಪಂತ್ ಹಾಗೂ ಇಶಾನ್ ಕಿಶನ್ ತಂಡದಲ್ಲಿದ್ದಾರೆ. ಟಿ20 ವಿಶ್ವಕಪ್​ ತಂಡದಲ್ಲಿದ್ದ ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ ಹಾಗೂ ರಾಹುಲ್ ಚಹರ್ ಅನ್ನು ಈ ಬಾರಿ ತಂಡದಿಂದ ಕೈ ಬಿಡಲಾಗಿದೆ.

ನ್ಯೂಜಿಲೆಂಡ್ ವಿರುದ್ದದ ಮೊದಲ ಟಿ20 ಪಂದ್ಯವು ನವೆಂಬರ್ 17 ರಂದು ಜೈಪುರದಲ್ಲಿ ನಡೆಯಲಿದ್ದು, 2ನೇ ಪಂದ್ಯವು ರಾಂಚಿಯಲ್ಲಿ ನವೆಂಬರ್ 19 ರಂದು ನಡೆಯಲಿದೆ. ಇನ್ನು 3ನೇ ಟಿ20 ಪಂದ್ಯವು ಕೊಲ್ಕತ್ತಾದಲ್ಲಿ ನವೆಂಬರ್ 21 ರಂದು ಜರುಗಲಿದೆ. ಈ ಸರಣಿಯೊಂದಿಗೆ ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಹೊಸ ಇನಿಂಗ್ಸ್ ಆರಂಭಿಸಲಿದ್ದಾರೆ.

ಭಾರತದ T20I ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಹಲ್, ಅಶ್ವಿನ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.

ನವೆಂಬರ್ 23 ರಿಂದ ಬ್ಲೋಮ್‌ಫಾಂಟೈನ್‌ನಲ್ಲಿ ಪ್ರಾರಂಭವಾಗಲಿರುವ ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಭಾರತ ಎ ತಂಡವನ್ನೂ ಕೂಡ ಪ್ರಕಟಿಸಲಾಗಿದ್ದು, ಈ ತಂಡವನ್ನು ಪ್ರಿಯಾಂಕ್ ಪಾಂಚಾಲ್ ಮುನ್ನಡೆಸಲಿದ್ದಾರೆ. ಈ ಟೀಮ್​ನಲ್ಲಿ ಕನ್ನಡಿಗರಾದ ದೇವದತ್ ಪಡಿಕ್ಕಲ್ ಹಾಗೂ ಕೃಷ್ಣಪ್ಪ ಗೌತಮ್ ಸ್ಥಾನ ಪಡೆದಿದ್ದಾರೆ. ಇನ್ನು ಕಳೆದ ಬಾರಿ ಟಿ20 ತಂಡದಲ್ಲಿದ್ದ ರಾಹುಲ್ ಚಹರ್​ಗೆ ಈ ಬಾರಿ ಭಾರತ ಎ ತಂಡದಲ್ಲಿ ಸ್ಥಾನ ನೀಡಲಾಗಿದೆ. ಹಾಗೆಯೇ ಜಮ್ಮು ಕಾಶ್ಮೀರದ ಯುವ ವೇಗಿ ಉಮ್ರಾನ್ ಮಲಿಕ್ ಕೂಡ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ‘ಎ’ ತಂಡ: ಪ್ರಿಯಾಂಕ್ ಪಾಂಚಾಲ್ (ನಾಯಕ), ಪೃಥ್ವಿ ಶಾ, ಅಭಿಮನ್ಯು ಈಶ್ವರನ್, ದೇವದತ್ ಪಡಿಕ್ಕಲ್, ಸರ್ಫರಾಜ್ ಖಾನ್, ಬಾಬಾ ಅಪರಾಜಿತ್, ಉಪೇಂದ್ರ ಯಾದವ್ (ವಿಕೆಟ್-ಕೀಪರ್), ಕೆ ಗೌತಮ್, ರಾಹುಲ್ ಚಹರ್, ಸೌರಭ್ ಕುಮಾರ್, ನವದೀಪ್ ಸೈನಿ , ಉಮ್ರಾನ್ ಮಲಿಕ್, ಇಶಾನ್ ಪೊರೆಲ್, ಅರ್ಜಾನ್ ನಾಗ್ವಾಸ್ವಾಲ್ಲಾ

ಇದನ್ನೂ ಓದಿ: ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಎಲ್ಲರನ್ನು ಹಿಂದಿಕ್ಕಿದ ಬಾಬರ್

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: T20 World Cup 2021: ಸೆಹ್ವಾಗ್-ಗಂಭೀರ್ ದಾಖಲೆ ಮುರಿದ ಕೆಎಲ್ ರಾಹುಲ್-ರೋಹಿತ್ ಶರ್ಮಾ

(India’s squad for T20Is against New Zealand)

TV9 Kannada


Leave a Reply

Your email address will not be published.