India vs New Zealand: ಭಾರತದ ವಿರುದ್ದದ ಸರಣಿಗೆ ನ್ಯೂಜಿಲೆಂಡ್ ತಂಡದಲ್ಲಿ ಮಹತ್ವದ ಬದಲಾವಣೆ | India vs new zealand: daryl mitchell replaces injured devon conway for test series


India vs New Zealand: ಭಾರತದ ವಿರುದ್ದದ ಸರಣಿಗೆ ನ್ಯೂಜಿಲೆಂಡ್ ತಂಡದಲ್ಲಿ ಮಹತ್ವದ ಬದಲಾವಣೆ

india vs new zealand

ಭಾರತದ ವಿರುದ್ದ ನಡೆಯಲಿರುವ 2 ಪಂದ್ಯಗಳ ಟೆಸ್ಟ್​ ಸರಣಿಗಾಗಿ ನ್ಯೂಜಿಲೆಂಡ್ (India vs New zealand​) ತಂಡವು ಮಹತ್ವದ ಬದಲಾವಣೆ ಮಾಡಿಕೊಂಡಿದೆ. ತಂಡದ ಖಾಯಂ ಸದಸ್ಯರಾದ ಡೆವೊನ್ ಕಾನ್ವೇ ಗಾಯಗೊಂಡಿರುವ ಕಾರಣ ಅವರನ್ನು ಟೀಮ್​ನಿಂದ ಕೈ ಬಿಡಲಾಗಿದೆ. ಅವರ ಬದಲಿ ಆಟಗಾರನಾಗಿ ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದ ಹೀರೋ ಡ್ಯಾರಿಲ್ ಮಿಚೆಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಮಿಚೆಲ್  ಇಂಗ್ಲೆಂಡ್ ವಿರುದ್ಧದ  ಸೆಮಿ-ಫೈನಲ್‌ನಲ್ಲಿ ಅಜೇಯ 72 ರನ್ ಬಾರಿಸಿ ತಂಡವನ್ನು ಫೈನಲ್​ಗೆ ತಲುಪಿಸಿದ್ದರು. ಹಾಗೆಯೇ ಟೀಮ್ ಇಂಡಿಯಾ ವಿರುದ್ದದ ಲೀಗ್​ ಪಂದ್ಯದಲ್ಲೂ 49 ರನ್ ಬಾರಿಸಿ ಮಿಂಚಿದ್ದರು. ಇದೀಗ ಈ ಭರ್ಜರಿ ಪ್ರದರ್ಶನ ಡ್ಯಾರಿಲ್​ ಮಿಚೆಲ್​ಗೆ ಟೆಸ್ಟ್​ ತಂಡದಲ್ಲೂ ಸ್ಥಾನ ಸಿಗುವಂತೆ ಮಾಡಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಗೂ ಮುನ್ನ 3 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ನವೆಂಬರ್ 17 ರಿಂದ ಜೈಪುರದಲ್ಲಿ ಟಿ20 ಸರಣಿ ಆರಂಭವಾಗಲಿದ್ದು, ಎರಡನೇ ಟಿ20 ನವೆಂಬರ್ 19 ರಂದು ರಾಂಚಿಯಲ್ಲಿ ನಡೆಯಲಿದೆ. ಹಾಗೆಯೇ ಮೂರನೇ ಟಿ20 ನವೆಂಬರ್ 21 ರಂದು ಕೋಲ್ಕತ್ತಾದಲ್ಲಿ ಜರುಗಲಿದೆ. ಇದರ ಬೆನ್ನಲ್ಲೇ ಮೊದಲ ಟೆಸ್ಟ್ ನವೆಂಬರ್ 25 ರಿಂದ ಕಾನ್ಪುರದಲ್ಲಿ ಆರಂಭವಾಗಲಿದ್ದು, ಎರಡನೇ ಟೆಸ್ಟ್ ಡಿಸೆಂಬರ್ 3 ರಿಂದ ಮುಂಬೈನಲ್ಲಿ ಶುರುವಾಗಲಿದೆ.

ಈಗಾಗಲೇ ಭಾರತ ಟೆಸ್ಟ್ ತಂಡವನ್ನು ಘೋಷಿಸಲಾಗಿದ್ದು, ವಿರಾಟ್ ಕೊಹ್ಲಿಯ ಅನುಪಸ್ಥಿತಿಯಲ್ಲಿ ಮೊದಲ ಟೆಸ್ಟ್​ನಲ್ಲಿ ಟೀಮ್ ಇಂಡಿಯಾವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಇನ್ನು ಮುಂಬೈನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದ ವೇಳೆಗೆ ಕೊಹ್ಲಿ ತಂಡವನ್ನು ಸೇರಿಸಿಕೊಳ್ಳಲಿದ್ದಾರೆ.

ನ್ಯೂಜಿಲೆಂಡ್ ಟೆಸ್ಟ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್, ಹೆನ್ರಿ ನಿಕೋಲ್ಸ್, ಅಜಾಜ್ ಪಟೇಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ವಿಲ್ ಸೋಮರ್ವಿಲ್ಲೆ, ಟಿಮ್ ಸೌಥಿ, ರಾಸ್ ಟೇಲರ್, ವಿಲ್ ಯಂಗ್, ನೀಲ್ ವ್ಯಾಗ್ನರ್

ಭಾರತ ಟೆಸ್ಟ್ ತಂಡ: ಅಜಿಂಕ್ಯಾ ರಹಾನೆ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ (ಉಪ – ನಾಯಕ), ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ದಿಮಾನ್ ಸಾಹ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್. ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ.

ಇದನ್ನೂ ಓದಿ: Explained: ನ್ಯೂಜಿಲೆಂಡ್-ಆಸ್ಟ್ರೇಲಿಯಾ ಮತ್ತೊಂದು ಭಾರತ-ಪಾಕಿಸ್ತಾನ್…ಆದರೆ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಈ ಜೋಡಿ ವಿಶ್ವಕಪ್ ಗೆದ್ದು ಕೊಡಲಿದೆ ಎಂದ ಮಾಜಿ ಕ್ರಿಕೆಟಿಗ

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಹೀಗಿದೆ

(india vs new zealand: daryl mitchell replaces injured devon conway for test series)

TV9 Kannada


Leave a Reply

Your email address will not be published. Required fields are marked *