India vs New Zealand
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಇಂದು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ T20 ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ (India vs New Zealand 3rd T20) ನಡೆಯಲಿದೆ. ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಈಗಾಗಲೇ ಜೈಪುರ ಮತ್ತು ರಾಂಚಿಯಲ್ಲಿ ನಡೆದ ಮೊದಲ ಎರಡು ಪಂದ್ಯಗಳನ್ನು ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಹೀಗಾಗಿ ಟೀಮ್ ಇಂಡಿಯಾ ಪಾಲಿಗೆ ಇದೊಂದು ಔಪಚಾರಿಕ ಪಂದ್ಯ. ಇದಾಗ್ಯೂ ಕೊನೆಯ ಟಿ20 ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ತವಕದಲ್ಲಿ ಟೀಮ್ ಇಂಡಿಯಾ. ಇನ್ನೊಂದೆಡೆ ಹೀನಾಯ ಸೋಲಿನ ಅವಮಾನವನ್ನು ತಪ್ಪಿಸಿಕೊಳ್ಳಲು ನ್ಯೂಜಿಲೆಂಡ್ ಕೂಡ ಶತಪ್ರಯತ್ನ ಮಾಡಲಿದೆ. ಹೀಗಾಗಿ ಇಂದಿನ ಪಂದ್ಯಗಳಿಂದ ಉಭಯ ತಂಡಗಳ ನಡುವೆ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.