India Squad: ಐಪಿಎಲ್ನಲ್ಲಿ 150 ಕಿ.ಮೀ ವೇಗದಲ್ಲಿ ಚೆಂಡೆಸೆದು ಮಿಂಚಿದ್ದ ಉಮ್ರಾನ್ ಮಲಿಕ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ರೀತಿ ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಕೂಡ ಅವಕಾಶ ಪಡೆದಿದ್ದಾರೆ.
ಬಿಸಿಸಿಐ, ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಹಾಗೂ ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾವನ್ನು (Team India) ಪ್ರಕಟಿಸಿದೆ. ಜೂನ್ 9 ರಿಂದ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದ್ದು, ಈ ಸರಣಿಗೆ ಕನ್ನಡಿಗ ಕೆಎಲ್ ರಾಹುಲ್ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ. ಹಾಗೆಯೇ ಇತರ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಟಿ20 ವಿಶ್ವಕಪ್ ಬಳಿಕ ಹಾರ್ದಿಕ್ ಪಾಂಡ್ಯ ಮೊದಲ ಬಾರಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಅಲ್ಲದೆ ಆರ್ಸಿಬಿ ಪರ ಆಡುತ್ತಿರುವ ದಿನೇಶ್ ಕಾರ್ತಿಕ್ ಇದೀಗ 3 ವರ್ಷಗಳ ಬಳಿಕ ಭಾರತ ತಂಡಕ್ಕೆ ಮರಳಿದ್ದಾರೆ. ಇನ್ನು ಟೆಸ್ಟ್ ತಂಡದ ನಾಯಕನಾಗಿ ರೋಹಿತ್ ಶರ್ಮಾ ಅವರೇ ಮುಂದುವರೆಯಲಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲಿ ಯುವಕರಿಗೆ ಅವಕಾಶ ಸಿಗಲಿದೆ ಎನ್ನಲಾಗಿತ್ತು. ಅದರಂತೆ ಐಪಿಎಲ್ನಲ್ಲಿ 150 ಕಿ.ಮೀ ವೇಗದಲ್ಲಿ ಚೆಂಡೆಸೆದು ಮಿಂಚಿದ್ದ ಉಮ್ರಾನ್ ಮಲಿಕ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅದೇ ರೀತಿ ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ಕೂಡ ಅವಕಾಶ ಪಡೆದಿದ್ದಾರೆ. ಮತ್ತೊಂದೆಡೆ, ಕಳಪೆ ಪ್ರದರ್ಶನದ ನಂತರವೂ ವೆಂಕಟೇಶ್ ಅಯ್ಯರ್ ಅವರಿಗೆ ಅವಕಾಶ ನೀಡಲಾಗಿದೆ.