Indira Gandhi Birth Anniversary: ಇಂದಿರಾ ಗಾಂಧಿ ಜನ್ಮದಿನ; ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ನಮನ | Narendra Modi Rahul Gandhi Siddaramaiah and other leaders tribute to Indira Gandhi on her birth anniversary


Indira Gandhi Birth Anniversary: ಇಂದಿರಾ ಗಾಂಧಿ ಜನ್ಮದಿನ; ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ನಮನ

ಮಾಜಿ ಪ್ರಧಾನಿ ಇಂದಿರಾ ಗಾಂಧಿ

ಇಂದು (ನವೆಂಬರ್ 19) ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮದಿನ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಸರ್ಕಾರದ ಸಚಿವ ನವಾಬ್ ಮಲಿಕ್, ರಾಜಸ್ಥಾನ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್ ಸೇರಿದಂತೆ ಅನೇಕ ನಾಯಕರು ಇಂದಿರಾಗಾಂಧಿ ಅವರನ್ನು ಸ್ಮರಿಸಿ ನಮನ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ಇಂದಿರಾಗೆ ನಮನ ಸಲ್ಲಿಸುತ್ತಾ, ದೇಶದ ಅತ್ಯಂತ ಭರವಸೆಯ ಪ್ರಧಾನ ಮಂತ್ರಿಗಳಲ್ಲಿ ಒಬ್ಬರು ಎಂದು ಕರೆದಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. “ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮದಿನದಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಅಜ್ಜಿ ಹಾಗೂ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರನ್ನು ಸ್ಮರಿಸಿದರು. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ದೇಶದ ಭರವಸೆಯ ಪ್ರಧಾನ ಮಂತ್ರಿಗಳಲ್ಲಿ ಇಂದಿರಾಗಾಂಧಿ ಅವರ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಬರೆಯಲಾಗಿದೆ. ಜನರ ನಡುವೆ ಬದುಕುವುದು ಮತ್ತು ಅವರ ಸುಖ-ದುಃಖಗಳನ್ನು ಹಂಚಿಕೊಳ್ಳುವುದು ಅವರ ದೊಡ್ಡ ಶಕ್ತಿಯಾಗಿತ್ತು. ಅಜ್ಜಿ, ನಿಮ್ಮ ಧೈರ್ಯ ಯಾವಾಗಲೂ ನಮಗೆ ಸ್ಫೂರ್ತಿ ನೀಡುತ್ತದೆ’’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿ, ನಮನ ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿ ಹಂಚಿಕೊಂಡ ಟ್ವೀಟ್:

ರಾಜ್ಯದ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿರಾ ಗಾಂಧಿಯವರ ತ್ಯಾಗ, ಬಲಿದಾನವನ್ನು ಸ್ಮರಿಸೋಣ ಎಂದು ಟ್ವೀಟ್ ಮಾಡಿದ್ದಾರೆ. ನಾಡಿನ ರೈತರು, ಶೋಷಿತರು, ಬಡಜನರ ಬಗೆಗಿನ ಕಾಳಜಿ, ಅವರ ಸ್ಥಿತಿಗತಿಗಳ ಸುಧಾರಣೆಗಾಗಿ ಕೈಗೊಂಡ ದಿಟ್ಟ ಕ್ರಮಗಳು ಇಂದಿರಾ ಗಾಂಧಿಯವರನ್ನು ಇಂದಿಗೂ ಜೀವಂತವಾಗಿರಿಸಿದೆ ಎಂದು ಅವರು ಬರೆದಿದ್ದಾರೆ.

ಸಿದ್ದರಾಮಯ್ಯ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಸರ್ಕಾರದ ಸಚಿವ ನವಾಬ್ ಮಲಿಕ್ ಕೂಡ ಇಂದಿರಾ ಗಾಂಧಿ ಅವರಿಗೆ ಗೌರವ ಸಲ್ಲಿಸಿದ್ದಾರೆ. ಅವರು ಟ್ವೀಟ್‌ ಮೂಲಕ, “ಭಾರತದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ನಮನಗಳು. ಅವರ ದೃಢವಾದ ನಾಯಕತ್ವ ಮತ್ತು ಶೌರ್ಯವನ್ನು ಮುಂದಿನ ಪೀಳಿಗೆಗಳು ನೆನಪಿಸಿಕೊಳ್ಳುತ್ತವೆ.” ಎಂದು ಬರೆದಿದ್ದಾರೆ.

ನವಾಬ್ ಮಲಿಕ್ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಟ್ವೀಟ್ ಮೂಲಕ, “ದೇಶದ ಮೊದಲ ಮಹಿಳಾ ಪ್ರಧಾನಿ, ಭಾರತ ರತ್ನ ಶ್ರೀಮತಿ ಇಂದಿರಾ ಗಾಂಧಿ ಅವರ ಜಯಂತಿಯಂದು ಅವರಿಗೆ ನಮನಗಳು. ಇಂದಿರಾ ಗಾಂಧಿಯವರಿಂದಾಗಿ, ಭಾರತ ವಿಶ್ವ ವೇದಿಕೆಯಲ್ಲಿ ಹೊಸ ಗುರುತನ್ನು ಪಡೆಯಿತು’’ಎಂದಿದ್ದಾರೆ.

ಅಶೋಕ್ ಗೆಹ್ಲೋಟ್ ಟ್ವೀಟ್ ಇಲ್ಲಿದೆ:

ಇದನ್ನೂ ಓದಿ:

ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ: ಮುಂದೇನು?

ಕೃಷಿ ತಿದ್ದುಪಡಿ ಕಾಯ್ದೆ ವಾಪಸ್, ಸರ್ಕಾರದ ನಿರ್ಧಾರಕ್ಕೇನು ಕಾರಣ?; ಬಿಜೆಪಿಗೆ ಇದು ಲಾಭದಾಯಕವೇ? ವಿಶ್ಲೇಷಣೆ ಇಲ್ಲಿದೆ

TV9 Kannada


Leave a Reply

Your email address will not be published. Required fields are marked *