ಇತ್ತೀಚೆಗಷ್ಟೆ ಇನ್ಫಿನಿಕ್ಸ್ ನೋಟ್ 12 ಮತ್ತು ಇನ್ಫಿನಿಕ್ಸ್ ನೋಟ್ 12 ಟರ್ಬೋ ಸ್ಮಾರ್ಟ್ಫೋನ್ ಆಗಿತ್ತು. ಈ ಎರಡೂ ಸ್ಮಾರ್ಟ್ಫೋನ್ಗಳ ಪೈಕಿ ಇನ್ಫಿನಿಕ್ಸ್ ನೋಟ್ 12 ಈಗ ಫ್ಲಿಪ್ಕಾರ್ಟ್ನಲ್ಲಿ (Flipkart) ಖರೀದಿಗೆ ಸಿಗುತ್ತಿದೆ.
ಸ್ಮಾರ್ಟ್ಫೋನ್ ಕ್ಷೇತ್ರದಲ್ಲಿ ಇನ್ಫಿನಿಕ್ಸ್ (Infinix) ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್ಗಳನ್ನು ಬಿಡುಗಡೆ ಮಾಡುವುದಕ್ಕಾಗಿ ಹೆಸರುವಾಸಿ. ಇದಕ್ಕಾಗಿಯೆ ಮಾರುಕಟ್ಟೆಯಲ್ಲಿ ಈ ಕಂಪನಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಇತ್ತೀಚೆಗಷ್ಟೆ ಇನ್ಫಿನಿಕ್ಸ್ ಮೊಬೈಲ್ ಕಂಪನಿ ಭಾರತದಲ್ಲಿ ತನ್ನ ಹೊಸ ಇನ್ಫಿನಿಕ್ಸ್ ನೋಟ್ 12 ಸರಣಿ (Infinix Note 12 series) ಅನ್ನು ಅನಾವರಣ ಮಾಡಿತ್ತು. ಇದರಲ್ಲಿ ಇನ್ಫಿನಿಕ್ಸ್ ನೋಟ್ 12 ಮತ್ತು ಇನ್ಫಿನಿಕ್ಸ್ ನೋಟ್ 12 ಟರ್ಬೋ ಸ್ಮಾರ್ಟ್ಫೋನ್ ಸೇರಿವೆ. ಈ ಎರಡೂ ಸ್ಮಾರ್ಟ್ಫೋನ್ಗಳ ಪೈಕಿ ಇನ್ಫಿನಿಕ್ಸ್ ನೋಟ್ 12 ಈಗ ಫ್ಲಿಪ್ಕಾರ್ಟ್ನಲ್ಲಿ (Flipkart) ಖರೀದಿಗೆ ಸಿಗುತ್ತಿದೆ. ಪ್ರಮುಖವಾಗಿ ನೋಟ್ 12 ಮತ್ತು ನೋಟ್ 12 ಟರ್ಬೋ 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಬ್ಯಾಟರಿಯನ್ನು ಹೊಂದಿವೆ. ಹಾಗಾದ್ರೆ ಇದರ ಬೆಲೆ ಎಷ್ಟು ಎಂಬುದನ್ನು ನೋಡೋಣ.