IPL ಟೂರ್ನಿಗೆ ಮುಹೂರ್ತ ಫಿಕ್ಸ್​; ಮೊದಲ ಪಂದ್ಯ ಎಲ್ಲಿ? ಯಾವಾಗ?

15ನೇ ಸೀಸನ್​ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟೂರ್ನಿ ಆರಂಭಕ್ಕೆ ಮುಹೂರ್ತ ಫಿಕ್ಸ್​ ಆಗಿದೆ. ಏಪ್ರಿಲ್‌ 2ರಂದು ಚನ್ನೈನಲ್ಲಿ ಆರಂಭವಾಗುವ ಸಾಧ್ಯತೆ ಇದೆ. ಮುಂದಿನ ವರ್ಷ ಐಪಿಎಲ್​​ ಟ್ರೋಫಿಗಾಗಿ ಒಟ್ಟು 10 ತಂಡಗಳು ಪೈಪೋಟಿ ನಡೆಸಲಿವೆ.

ಐಪಿಎಲ್​​ ಪಂದ್ಯಗಳ ಪಟ್ಟಿಯನ್ನು ಇನ್ನೂ ಅಂತಿಮಗೊಳಿಸದ ಬಿಸಿಸಿಐ, ಏಪ್ರಿಲ್​​ 2ರಂದು ಚೆನ್ನೈಯಲ್ಲಿ ಟೂರ್ನಿ ಆರಂಭಿಸಲು ಚಿಂತನೆ ನಡೆಸಿದೆ. ಈ ಕುರಿತು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಪಾಲುದಾರರಿಗೆ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ.

60 ದಿನಗಳಲ್ಲಿ ಒಟ್ಟು 74 ಪಂದ್ಯಗಳು ಆಯೋಜಿಸಲು ಬಿಸಿಸಿಐ ಆಂತರಿಕ ಸಭೆಯಲ್ಲಿ ಚರ್ಚಿಸಿದೆ. ಈ ಲೆಕ್ಕಾಚಾರದ ಪ್ರಕಾರ, ಜೂನ್ ಮೊದಲ ವಾರಾಂತ್ಯದಲ್ಲಿ ಫೈನಲ್ ಪಂದ್ಯ ನಡೆಯುವ ನಿರೀಕ್ಷೆ ಇದೆ.

News First Live Kannada

Leave a comment

Your email address will not be published. Required fields are marked *