1/5
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಜಸ್ಥಾನ್ ರಾಯಲ್ಸ್ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಈ ಪಟ್ಟಿಯಲ್ಲಿ ಇಬ್ಬರು ಭಾರತೀಯ ಆಟಗಾರರಿದ್ದು, ಹಾಗೆಯೇ ಒಬ್ಬ ವಿದೇಶಿ ಆಟಗಾರರನ್ನು ಆರ್ಆರ್ ತಂಡ ಉಳಿಸಿಕೊಂಡಿದೆ.
2/5
ಅದರಂತೆ ರಾಜಸ್ಥಾನ್ ರಾಯಲ್ಸ್ ಮೊದಲ ಆಯ್ಕೆಯಾಗಿ ಪ್ರಸ್ತುತ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರನ್ನು ತಂಡದಲ್ಲೇ ಉಳಿಸಿಕೊಂಡಿದ್ದಾರೆ. ಸ್ಯಾಮ್ಸನ್ ಕಳೆದ ಕೆಲ ಸೀಸನ್ಗಳಿಂದ ಆರ್ಆರ್ ಪರ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರನ್ನು ರಾಜಸ್ಥಾನ್ ಫ್ರಾಂಚೈಸಿ ರಿಟೈನ್ ಮಾಡಿಕೊಂಡಿದೆ.
3/5
ಇನ್ನು ಇಂಗ್ಲೆಂಡ್ ವಿಕೆಟ್ ಕೀಪರ್ ಬ್ಯಾಟರ್ ಜೋಸ್ ಬಟ್ಲರ್ ಅವರನ್ನೂ ಕೂಡ ರಾಜಸ್ಥಾನ್ ರಾಯಲ್ಸ್ ತಂಡವು ರಿಟೈನ್ ಮಾಡಿಕೊಂಡಿದೆ. ಬಟ್ಲರ್ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಅವರನ್ನು ಸಹ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ.
4/5
ಹಾಗೆಯೇ ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮೂರನೇ ಆಟಗಾರ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್. ಕಳೆದ ಸೀಸನ್ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಜೈಸ್ವಾಲ್ ಅವರನ್ನೂ ಸಹ ಬಿಡುಗಡೆ ಮಾಡದಿರಲು ರಾಜಸ್ಥಾನ್ ನಿರ್ಧರಿಸಿದೆ. ಅದರಂತೆ ಈ ಮೂವರು ಆಟಗಾರರು ರಾಜಸ್ಥಾನ್ ರಾಯಲ್ಸ್ ತಂಡದಲ್ಲೇ ಇರಲಿರುವುದು ಖಚಿತವಾಗಿದೆ.
5/5
2021ರ ರಾಜಸ್ಥಾನ್ ರಾಯಲ್ಸ್ ತಂಡ ಹೀಗಿತ್ತು: ಸಂಜು ಸ್ಯಾಮ್ಸನ್, ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್, ಜೋಸ್ ಬಟ್ಲರ್, ರಿಯಾನ್ ಪರಾಗ್, ಶ್ರೇಯಾಸ್ ಗೋಪಾಲ್, ರಾಹುಲ್ ತೇವಟಿಯಾ, ಮಹಿಪಾಲ್ ಲೊಮರ್, ಕಾರ್ತಿಕ್ ತ್ಯಾಗಿ, ಆಂಡ್ರ್ಯೂ ಟೈ, ಜಯದೇವ್ ಉನಾದ್ಕತ್, ಮಾಯಾಂಕ್ ಮಾರ್ಕಂಡೆ, ಯಶಸ್ವಿ ಜೈಸ್ವಾಲ್, ಅನುಜ್ ರಾವತ್, ಡೇವಿಡ್ ಮಿಲ್ಲರ್, ಮನಮ್ ವೊಹ್ರಾ , ಕ್ರಿಸ್ ಮೋರಿಸ್, ಮುಸ್ತಾಫಿಜುರ್ ರಹೀಮ್, ಚೇತನ್ ಸಕರಿಯಾ, ಕೆ.ಸಿ.ಕಾರ್ಯಪ್ಪ, ಲಿಯಾಮ್ ಲಿವಿಂಗ್ಸ್ಟೋನ್, ಕುಲದೀಪ್ ಯಾದವ್, ಆಕಾಶ್ ಸಿಂಗ್