IPL 2022: ಡೆಲ್ಲಿ ಕ್ಯಾಪಿಟಲ್ಸ್​ ನಾಲ್ವರು ಫೈನಲ್: ಸ್ಟಾರ್ ಆಟಗಾರರು ರಿಲೀಸ್ | IPL 2022 Delhi Capitals to retain Players List

1/7

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಹರಾಜಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ. ಅದರಂತೆ ಪ್ರಸ್ತುತ ತಂಡದ ನಾಯಕ ರಿಷಭ್ ಪಂತ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಳ್ಳಲಿದೆ. ಇದಾಗ್ಯೂ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಬಿಡುಗಡೆ ಮಾಡಲಿದೆ ಎಂದು ಡೆಲ್ಲಿ ಫ್ರಾಂಚೈಸಿ ಮೂಲಗಳಿಂದ ತಿಳಿದು ಬಂದಿದೆ.

2/7

ಅಷ್ಟೇ ಅಲ್ಲದೆ ಶಿಖರ್ ಧವನ್ ಅವರನ್ನು ಕೂಡ ಡೆಲ್ಲಿ ಕ್ಯಾಪಿಟಲ್ಸ್ ರಿಲೀಸ್ ಮಾಡಲಿದ್ದು, ಜೊತೆಗೆ ಆರ್​ ಅಶ್ವಿನ್, ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮೆಯರ್ ಸೇರಿದಂತೆ ಪ್ರಮುಖ ಆಟಗಾರರನ್ನು ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಲಿದೆ. ಹಾಗಿದ್ರೆ ಡೆಲ್ಲಿ ತಂಡವು ಉಳಿಸಿಕೊಳ್ಳಲಿರುವ ನಾಲ್ವರು ಆಟಗಾರರು ಯಾರೆಂದು ನೋಡುವುದಾದರೆ....

ಅಷ್ಟೇ ಅಲ್ಲದೆ ಶಿಖರ್ ಧವನ್ ಅವರನ್ನು ಕೂಡ ಡೆಲ್ಲಿ ಕ್ಯಾಪಿಟಲ್ಸ್ ರಿಲೀಸ್ ಮಾಡಲಿದ್ದು, ಜೊತೆಗೆ ಆರ್​ ಅಶ್ವಿನ್, ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮೆಯರ್ ಸೇರಿದಂತೆ ಪ್ರಮುಖ ಆಟಗಾರರನ್ನು ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಲಿದೆ. ಹಾಗಿದ್ರೆ ಡೆಲ್ಲಿ ತಂಡವು ಉಳಿಸಿಕೊಳ್ಳಲಿರುವ ನಾಲ್ವರು ಆಟಗಾರರು ಯಾರೆಂದು ನೋಡುವುದಾದರೆ….

3/7

ರಿಷಭ್ ಪಂತ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ರಿಷಭ್ ಪಂತ್ ಅವರನ್ನೇ ಮುಂದುವರೆಸಲು ಫ್ರಾಂಚೈಸಿ ನಿರ್ಧರಿಸಿದೆ. ಅದರಂತೆ ಪಂತ್ ಅವರನ್ನು ಮೊದಲ ಆಯ್ಕೆಯಾಗಿ ರಿಟೈನ್ ಮಾಡಿಕೊಳ್ಳಲಿದೆ.

4/7

 ಪೃಥ್ವಿ ಶಾ: ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಯುವ ಆರಂಭಿಕ ಆಟಗಾರ ಪೃಥ್ವಿ ಶಾ ಅವರನ್ನೂ ಕೂಡ ರಿಟೈನ್ ಮಾಡಿಕೊಳ್ಳಲು ಬಯಸಿದ್ದಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯ ಮೂಲಗಳಿಂದ ತಿಳಿದು ಬಂದಿದೆ.

5/7

ಅಕ್ಷರ್ ಪಟೇಲ್: ಯುವ ಸ್ಪಿನ್ ಆಲ್​ರೌಂಡರ್ ಅಕ್ಷರ್ ಪಟೇಲ್ ಅವರನ್ನು ಕೂಡ ಡೆಲ್ಲಿ ಕ್ಯಾಪಿಟಲ್ಸ್ ರಿಟೈನ್ ಮಾಡಿಕೊಳ್ಳಲಿದೆ. ಈ ಮೂಲಕ ಆಲ್​ರೌಂಡರ್ ಒಬ್ಬರನ್ನು ತಂಡದಲ್ಲೇ ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ.

6/7

 ಅನ್ರಿಕ್ ನೋಕಿಯಾ: ಇನ್ನು ವಿದೇಶಿ ಕೋಟಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕಗಿಸೊ ರಬಾಡ ಬದಲಿಗೆ ಅನ್ರಿಕ್ ನೋಕಿಯಾರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ. ಹೀಗಾಗಿ ಐಪಿಎಲ್​ನ ಅತ್ಯಂತ ವೇಗದ ಬೌಲರ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ.

7/7

ಡೆಲ್ಲಿ ಕ್ಯಾಪಿಟಲ್ಸ್​ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ಈ ನಾಲ್ವರ ಹೆಸರನ್ನು ಫೈನಲ್ ಮಾಡಲಾಗಿದ್ದು, ಇದಾಗ್ಯೂ ಮತ್ತೊಂದು ಸುತ್ತಿನ ಚರ್ಚೆಯ ಬಳಿಕವಷ್ಟೇ ಅಧಿಕೃತ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

TV9 Kannada

Leave a comment

Your email address will not be published. Required fields are marked *