IPL 2022: ಪ್ಲೇಆಫ್​ಗೆ ಎಂಟ್ರಿ ಕೊಟ್ಟ ಬೆನ್ನಲ್ಲೇ RCB ಗೆ ಹೊಸ ಚಿಂತೆ..! | IPL 2022 Playoffs: RCB to take on LSG in Eliminator


IPL 2022 Playoffs: ಈ ಬಾರಿಯ ಐಪಿಎಲ್​ನ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಆರ್​ಸಿಬಿ, ದ್ವಿತಿಯಾರ್ಧದಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ.

IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ ಸೀಸನ್​ 15 ನಲ್ಲಿ ನಾಲ್ಕನೇ ತಂಡವಾಗಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇದರೊಂದಿಗೆ ಪ್ಲೇಆಫ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಲ್ಲಿ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ (GT vs RR) ಕ್ವಾಲಿಫೈಯರ್ 1 ಪಂದ್ಯವಾಡಲಿದೆ. ಆದರೆ ಆರ್​ಸಿಬಿ ಆಡಬೇಕಿರುವುದು ಎಲಿಮಿನೇಟರ್ ಪಂದ್ಯ ಎಂಬುದು ವಿಶೇಷ. ಅಂದರೆ ಪಾಯಿಂಟ್ಸ್ ಟೇಬಲ್​ನಲ್ಲಿ ಮೂರನೇ ಮತ್ತು ನಾಲ್ಕನೇ ಸ್ಥಾನ ಪಡೆದಿರುವ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದೆ. ಅದರಂತೆ ಆರ್​ಸಿಬಿ ತಂಡವು ಮೇ 25 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ದ (RCB vs LSG) ಎಲಿಮಿನೇಟರ್ ಪಂದ್ಯ ವಾಡಲಿದೆ. ಕೊಲ್ಕತ್ತಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೋಲುವ ತಂಡ ಐಪಿಎಲ್​ನಿಂದ ಹೊರಬೀಳಲಿದೆ. ಹೀಗಾಗಿ ಈ ಪಂದ್ಯವು RCB ಪಾಲಿಗೆ ನಿರ್ಣಾಯಕ ಪಂದ್ಯ.

ಏಕೆಂದರೆ ಎಲಿಮಿನೇಟರ್ ಪಂದ್ಯವಾಡುವ ಆರ್​ಸಿಬಿ ಅಥವಾ ಲಕ್ನೋ ಸೂಪರ್ ಜೈಂಟ್ಸ್​ ಐಪಿಎಲ್​ನಿಂದ ಹೊರಬೀಳಲಿದೆ. ಇದರೊಂದಿಗೆ ಐಪಿಎಲ್​ ಅಭಿಯಾನ ಕೂಡ ಅಂತ್ಯವಾಗಲಿದೆ. ಇತ್ತ ಕಳೆದ 7 ಪಂದ್ಯಗಳಲ್ಲಿ ಆರ್​ಸಿಬಿ ತಂಡವು ಗೆದ್ದಿರುವುದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಅದರಲ್ಲೂ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ದ ಮುಂಬೈ ಇಂಡಿಯನ್ಸ್ ಗೆದ್ದ ಪರಿಣಾಮ ಆರ್​ಸಿಬಿ ತಂಡವು ಮೈನಸ್ ನೆಟ್​ ರನ್​ ರೇಟ್ ಇದ್ದರೂ 16 ಪಾಯಿಂಟ್ಸ್​ನೊಂದಿಗೆ ಪ್ಲೇಆಫ್ ಪ್ರವೇಶಿಸುವಂತಾಯಿತು. ಹೀಗಾಗಿಯೇ ಆರ್​ಸಿಬಿ ಪಾಲಿಗೆ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯ ನಿರ್ಣಾಯಕವಾಗಿತ್ತು.

TV9 Kannada


Leave a Reply

Your email address will not be published. Required fields are marked *