IPL 2022: 20 ಕೋಟಿ ಪಕ್ಕಾ…ಐಪಿಎಲ್ ದುಬಾರಿ ಆಟಗಾರ ಯಾರೆಂದು ತಿಳಿಸಿದ ಮಾಜಿ ಕ್ರಿಕೆಟಿಗ | Aakash Chopra predicts ‘most expensive player’ in IPL 2022 auction

IPL 2022: 20 ಕೋಟಿ ಪಕ್ಕಾ...ಐಪಿಎಲ್ ದುಬಾರಿ ಆಟಗಾರ ಯಾರೆಂದು ತಿಳಿಸಿದ ಮಾಜಿ ಕ್ರಿಕೆಟಿಗ

IPL 2022

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 (IPL 2022) ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳಿಗೆ ಹರಾಜಿಗಾಗಿ ಸಿದ್ಧತೆಗಳನ್ನು ಆರಂಭಿಸುವಂತೆ ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ. ಅದರಂತೆ 8 ಫ್ರಾಂಚೈಸಿಗಳು ಆಟಗಾರರ ರಿಟೈನ್ ಪ್ರಕ್ರಿಯೆಯತ್ತ ಗಮನಹರಿಸುತ್ತಿದ್ದಾರೆ. ಆಟಗಾರರ ರಿಟೈನ್ ಪಟ್ಟಿಯನ್ನು ಪ್ರಕಟಿಸಿದ ಬಳಿಕ ಮೆಗಾ ಹರಾಜು ನಡೆಯಲಿದೆ. ಆದರೆ ಈ ಬಾರಿ ಒಟ್ಟು 10 ತಂಡಗಳಿರಲಿದ್ದು, ಹೀಗಾಗಿ ಬಹುತೇಕ ಆಟಗಾರರು ಹರಾಜಿನಲ್ಲಿ ಕಾಣಿಸಿಕೊಳ್ಳಲು ಬಯಸಿದ್ದಾರೆ. ಈ ಪಟ್ಟಿಯಲ್ಲಿ ತುಸು ಜೋರಾಗಿ ಕೇಳಿ ಬರುತ್ತಿರುವ ಹೆಸರೆಂದರೆ ಕೆಎಲ್ ರಾಹುಲ್. ಹೌದು, ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್ ತಂಡವನ್ನು ತೊರೆಯಲು ಬಯಸಿದ್ದಾರೆ. ಹಾಗಾಗಿ ಅವರು ಮುಂದಿನ ಸೀಸನ್​ ಹರಾಜಿಗಾಗಿ ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ. ಒಂದು ವೇಳೆ ಕೆಎಲ್ ರಾಹುಲ್ ಹರಾಜಿನಲ್ಲಿ ಕಾಣಿಸಿಕೊಂಡರೆ ಬೃಹತ್ ಮೊತ್ತಕ್ಕೆ ಬಿಕರಿಯಾಗಲಿದ್ದಾರೆ ಎಂದಿದ್ದಾರೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ.

ಆಕಾಶ್ ಚೋಪ್ರಾ ಪ್ರಕಾರ, ಕೆಎಲ್ ರಾಹುಲ್ ಐಪಿಎಲ್​ನ ಅತ್ಯಂತ ದುಬಾರಿ ಆಟಗಾರನಾಗಲಿದ್ದಾರೆ. ಏಕೆಂದರೆ ಅವರ ಹೆಸರು ಹರಾಜಿನಲ್ಲಿ ಕಾಣಿಸಿಕೊಂಡರೆ ಎಲ್ಲಾ ಫ್ರಾಂಚೈಸಿಗಳು ಕೂಡ ಖರೀದಿಗಾಗಿ ಪೈಪೋಟಿ ನಡೆಸಲಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಹರಾಜಿಗೆ ಹೆಸರು ನೀಡಿದರೆ 20 ಕೋಟಿಗೂ ಅಧಿಕ ಮೊತ್ತಕ್ಕೆ ಹರಾಜಾಗಲಿದ್ದಾರೆ ಎಂದು ಆಕಾಶ್ ಚೋಪ್ರಾ ಭವಿಷ್ಯ ನುಡಿದಿದ್ದಾರೆ.

ಅಷ್ಟೇ ಅಲ್ಲದೆ ಐಪಿಎಲ್ ಇತಿಹಾಸ ಅತ್ಯಂತ ದುಬಾರಿ ಆಟಗಾರನಾಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದರಲ್ಲಿ ಅನುಮಾನವೇ ಇಲ್ಲ ಎಂದಿದ್ದಾರೆ ಆಕಾಶ್ ಚೋಪ್ರಾ. ಏಕೆಂದರೆ ಪಂಜಾಬ್ ಕಿಂಗ್ಸ್​ ಕೆಎಲ್ ರಾಹುಲ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಇದೀಗ ಹೊಸ ಎರಡು ತಂಡಗಳು ಸೇರಿ ಬಹುತೇಕ ತಂಡಗಳು ನಾಯಕ, ವಿಕೆಟ್ ಕೀಪರ್ ಹಾಗೂ ಅತ್ಯುತ್ತಮ ಆರಂಭಿಕನ ಹುಡುಕಾಟದಲ್ಲಿದೆ. ಹೀಗಾಗಿ ಕೆಎಲ್ ರಾಹುಲ್ ಖರೀದಿಯೊಂದಿಗೆ ಈ ಮೂರು ಆಯ್ಕೆ ಒಬ್ಬರಿಂದಲೇ ಸಿಗಲಿದೆ. ಈ ಎಲ್ಲಾ ಕಾರಣಗಳಿಂದ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಹಾಟ್ ಫೇವರೇಟ್ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ಇದನ್ನೂ ಓದಿ: Rahul Dravid: ರಾಹುಲ್ ದ್ರಾವಿಡ್ ಹಾಗೂ ರವಿ ಶಾಸ್ತ್ರಿ ನಡುವಣ ವ್ಯತ್ಯಾಸ ತಿಳಿಸಿದ ಗೌತಮ್ ಗಂಭೀರ್

TV9 Kannada

Leave a comment

Your email address will not be published. Required fields are marked *