IPL 2022 Points Table: ಲೀಗ್ ಪಂದ್ಯಗಳು ಮುಕ್ತಾಯ: ಪಾಯಿಂಟ್ ಟೇಬಲ್, ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ? | Punjab Kings finish 6th, Shikhar Dhawan and Umran Malik rise to 4th check IPL 2022 Points Table


IPL 2022 Orange Cap and Purple Cap: ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿ ರೋಚಕ ಘಟ್ಟದತ್ತ ತಲುಪಿದೆ. ನಾಳೆಯಿಂದ ಪ್ಲೇ ಆಫ್ ಸುತ್ತಿನ ಪಂದ್ಯಗಳು ಶುರುವಾಗಲಿದೆ. ಈ ಬಾರಿ ಮುಂಬೈ ಇಂಡಿಯನ್ಸ್, ಕೆಕೆಆರ್, ಪಂಜಾಬ್, ಹೈದರಾಬಾದ್, ಡೆಲ್ಲಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಟೂರ್ನಿಯಿಂದ ಹೊರಬಿದ್ದಿದೆ. ಇದರ ನಡುವೆ ಎರಡು ಹೊಸ ತಂಡಗಳಾದ ಗುಜರಾತ್ ಮತ್ತು ಲಖನೌ ಕೂಡ ಕಪ್ ಗೆಲ್ಲುವ ನಿರೀಕ್ಷೆ ಹುಟ್ಟಿಸಿದ್ದು, ಎರಡೂ ತಂಡಗಳು ಕ್ವಾಲಿಫೈ ಆಗಿವೆ. ಆರ್​ಸಿಬಿ ಹಾಗೂ ರಾಜಸ್ಥಾನ್ ಕೂಡ ಪ್ಲೇ ಆಫ್ ಸುತ್ತಿಗೆ ಪ್ರವೇಶ ಪಡೆದಿದೆ. ಹಾಗಾದ್ರೆ ಈ ಬಾರಿ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

ಪಾಯಿಂಟ್ ಟೇಬಲ್:

  1. ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ಮೊದಲ ಸ್ಥಾನದಲ್ಲಿದ್ದು ಕ್ವಾಲಿಫೈ ಆದ ಮೊದಲ ತಂಡವಾಗಿದೆ. ಆಡಿದ ಎಲ್ಲ 14 ಪಂದ್ಯಗಳ ಪೈಕಿ ಕೇವಲ ನಾಲ್ಕರಲ್ಲಿ ಸೋಲು, ಹತ್ತರಲ್ಲಿ ಗೆಲುವು ಕಂಡು 20 ಅಂಕದೊಂದಿಗೆ ಪ್ಲೇ ಆಫ್ ಪ್ರವೇಶಿಸಿದೆ. ಗುಜರಾತ್ ನಿವ್ವಳ ರನ್ ರೇಟ್ +0.316 ಆಗಿದೆ.
  2. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಸಿಎಸ್​ಕೆ ವಿರುದ್ಧ ಗೆಲ್ಲುವ ಮೂಲಕ ಕ್ವಾಲಿಫೈ ಆಗಿದ್ದು ಎರಡನೇ ಸ್ಥಾನಕ್ಕೇರಿದೆ. ಇವರು ಆಡಿದ 14 ಪಂದ್ಯಗಳ ಪೈಕಿ ಒಂಬತ್ತರಲ್ಲಿ ಗೆಲುವು ಐದರಲ್ಲಿ ಸೋಲುಂಡು ಒಟ್ಟು 18 ಅಂಕ ಸಂಪಾದಿಸಿದೆ. ಆರ್​ಆರ್​ +0.298 ರನ್​​ರೇಟ್ ಹೊಂದಿದೆ.
  3. ಮತ್ತೊಂದು ಹೊಸ ತಂಡವಾದ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ಕೂಡ ಕ್ವಾಲಿಫೈ ಆಗಿ ಮೂರನೇ ಸ್ಥಾನದಲ್ಲಿದೆ. ಇವರು ಆಡಿದ 14 ಪಂದ್ಯಗಳ ಪೈಕಿ ಒಂಬತ್ತರಲ್ಲಿ ಗೆದ್ದು ಐದು ಪಂದ್ಯಗಳಲ್ಲಿ ಸೋತು ಒಟ್ಟು 18 ಅಂಕದೊಂದಿಗೆ ಲಖನೌದ ನಿವ್ವಳ ರನ್ ರೇಟ್ 0.251 ಆಗಿದೆ.
  4. ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಲ್ಕನೇ ಸ್ಥಾನಕ್ಕೇರಿದೆ. ಆಡಿದ 14 ಪಂದ್ಯಗಳಲ್ಲಿ ಆರರಲ್ಲಿ ಸೋಲು ಎಂಟರಲ್ಲಿ ಗೆಲುವು ಕಂಡಿದೆ. 16 ಅಂಕದೊಂದಿಗೆ RCB ನಿವ್ವಳ ರನ್ ರೇಟ್ -0.253 ಆಗಿದೆ.
  5. ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ ಸೋತಿದ್ದು ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. 14 ಅಂಕದೊಂದಿಗೆ ಡೆಲ್ಲಿಯ ನಿವ್ವಳ ರನ್ ರೇಟ್ 0.204 ಆಗಿದೆ.
  6. ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಎಸ್​​ಆರ್​ಹೆಚ್ ವಿರುದ್ಧ ಗೆದ್ದು ಆರನೇ ಸ್ಥಾನದಲ್ಲಿ ಟೂರ್ನಿಯನ್ನು ಮುಗಿಸಿದೆ. 14 ಪಂದ್ಯಗಳ ಪೈಕಿ 7 ರಲ್ಲಿ ಗೆಲುವು ಏಳರಲ್ಲಿ ಸೋಲು ಕಂಡು 14 ಅಂಕದೊಂದಿಗೆ ಪಂಜಾಬ್ ನಿವ್ವಳ ರನ್ ರೇಟ್ 0.126 ಆಗಿದೆ.
  7. ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರನೇ ಸ್ಥಾನದಲ್ಲಿದ್ದು ಟೂರ್ನಿಯಿಂದ ಹೊರಬಿದ್ದಾಗಿದೆ. ಆಡಿದ 14 ಪಂದ್ಯಗಳ ಪೈಕಿ ಆರರಲ್ಲಿ ಗೆಲುವು, ಉಳಿದ ಪಂದ್ಯಗಳಲ್ಲಿ ಸೋಲು ಕಂಡು ಒಟ್ಟು 12 ಅಂಕದೊಂದಿಗೆ 0.146 ರನ್​​ರೇಟ್​ ಹೊಂದಿದೆ.
  8. ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಎಂಟನೇ ಸ್ಥಾನದಲ್ಲಿದೆ. ಆಡಿದ 14 ಪಂದ್ಯಗಳಲ್ಲಿ ಆರಲ್ಲಷ್ಟೆ ಜಯ ಸಾಧಿಸಿ 12 ಅಂಕ ಸಂಪಾದಿಸಿ -0.379 ರನ್ ರೇಟ್ ಹೊಂದಿದೆ.
  9. ಇತ್ತ ಆಡಿದ 14 ಪಂದ್ಯಗಳ ಪೈಕಿ 10 ರಲ್ಲಿ ಸೋಲು ನಾಲ್ಕರಲ್ಲಿ ಗೆಲುವು ಕಂಡಿರುವ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 8 ಅಂಕದೊಂದಿಗೆ -0.203 ರನ್​ರೇಟ್​​ ಹೊಂದಿ ಎಂಟನೇ ಸ್ಥಾನದಲ್ಲಿದೆ.
  10. ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಎಂಐ ಆಡಿದ 14 ಪಂದ್ಯದ ಪೈಕಿ ನಾಲ್ಕರಲ್ಲಿ ಜಯ ಸಾಧಿಸಿದೆ. ಮುಂಬೈ ನಿವ್ವಳ ರನ್ ರೇಟ್ -0.506.

Liam Livingstone: ಐಪಿಎಲ್ 2022 ಬೆಸ್ಟ್ ಕ್ಯಾಚ್ ಇದೇ ಆಗುತ್ತಾ?: ಲಿವಿಂಗ್​ಸ್ಟೋನ್ ಹಿಡಿದ ರೋಚಕ ಕ್ಯಾಚ್ ನೋಡಿ

ಆರೆಂಜ್ ಕ್ಯಾಪ್:

ಅತಿ ಹೆಚ್ಚು ರನ್ ಗಳಿಸಿದವರ ಮೊದಲ ಸ್ಥಾನದಲ್ಲಿ ಆರ್​ ಆರ್​ ತಂಡದ ಜೋಸ್ ಬಟ್ಲರ್ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರ ಪಡಿಸಿಕೊಂಡಿದ್ದು ಮೂರು ಅರ್ಧಶತಕ 3 ಶತಕದೊಂದಿಗೆ ಇವರು 14 ಪಂದ್ಯಗಳಿಂದ 629 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಲಖನೌ ತಂಡದ ನಾಯಕ ಕೆಎಲ್ ರಾಹುಲ್ ಎರಡನೇ ಸ್ಥಾನದಲ್ಲಿದ್ದು 14 ಪಂದ್ಯಗಳಿಂದ 537 ರನ್ ಗಳಿಸಿದ್ದಾರೆ. ಮೂರನೇ ಸ್ಥಾನಕ್ಕೆ ಲಖನೌ ಬ್ಯಾಟರ್ ಕ್ವಿಂಟನ್ ಡಿಕಾಕ್ ಜಿಗಿದಿದ್ದು 14 ಪಂದ್ಯಗಳಿಂದ 502 ರನ್ ಕಲೆಹಾಕಿದ್ದಾರೆ. ಶಿಖರ್ ಧವನ್ 14 ಪಂದ್ಯಗಳಿಂದ 460 ರನ್ ಗಳಿಸಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಫಾಪ್ ಡುಪ್ಲೆಸಿಸ್ ಐದನೇ ಸ್ಥಾನದಲ್ಲಿದ್ದು 14 ಪಂದ್ಯಗಳಿಂದ 443 ರನ್ ಸಿಡಿಸಿದ್ದಾರೆ.

ಪರ್ಪಲ್ ಕ್ಯಾಪ್:

ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಯುಜ್ವೇಂದ್ರ ಚಹಲ್ ಅಗ್ರಸ್ಥಾನದಲ್ಲಿದ್ದಾರೆ. ಇವರು ಆಡಿದ 14 ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 26 ವಿಕೆಟ್ ಕಬಳಿಸಿದ್ದಾರೆ. ವನಿಂದು ಹಸರಂಗ ಎರಡನೇ ಸ್ಥಾನಕ್ಕೆ ಕುಸಿದಿದ್ದು 14 ಪಂದ್ಯಗಳಿಂದ 24 ವಿಕೆಟ್ ಕಿತ್ತಿದ್ದಾರೆ. ಮೂರನೇ ಸ್ಥಾನದಲ್ಲಿ ಕಗಿಸೊ ರಬಾಡ ಅವರಿದ್ದು 13 ಪಂದ್ಯಗಳಿಂದ 23 ವಿಕೆಟ್ ತಮ್ಮದಾಗಿಸಿದ್ದಾರೆ. ಉಮ್ರಾನ್ ಮಲಿಕ್ 4ನೇ ಸ್ಥಾನದಲ್ಲಿದ್ದು 14 ಪಂದ್ಯಗಳಲ್ಲಿ 22 ವಿಕೆಟ್ ಪಡೆದಿದ್ದಾರೆ. ಕುಲ್ದೀಪ್ ಯಾದವ್ 14 ಪಂದ್ಯಗಳಲ್ಲಿ 21 ವಿಕೆಟ್ ಪಡೆದು 5ನೇ ಸ್ಥಾನದಲ್ಲಿದ್ದಾರೆ.

TV9 Kannada


Leave a Reply

Your email address will not be published. Required fields are marked *