IPL 2022 Points Table: 14 ಅಂಕದೊಂದಿಗೆ ಗುಜರಾತ್ ಪ್ಲೇ ಆಫ್ ಹಾದಿ ಸುಗಮ: ಐಪಿಎಲ್ 2022 ಪಾಯಿಂಟ್ ಟೇಬಲ್ ಹೇಗಿದೆ? | IPL 2022 Points Table Update Latest Orange Cap Purple Cap Lists After GT vs SRH Match 40 Check here


IPL 2022 Points Table: 14 ಅಂಕದೊಂದಿಗೆ ಗುಜರಾತ್ ಪ್ಲೇ ಆಫ್ ಹಾದಿ ಸುಗಮ: ಐಪಿಎಲ್ 2022 ಪಾಯಿಂಟ್ ಟೇಬಲ್ ಹೇಗಿದೆ?

IPL 2022 Points Table

ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) 15ನೇ ಆವೃತ್ತಿಯ ಅಸಲಿ ಆಟ ಈಗ ಶುರುವಾಗಿದೆ. ಒಂದು ತಂಡದ ಸೋಲು-ಗೆಲುವು ಇನ್ನೊಂದು ತಂಡದ ಅಳಿವು-ಉಳಿವಿನ ಲೆಕ್ಕಚಾರ ಆರಂಭವಾಗಿದೆ. ಈ ಬಾರಿ ಹಿಂದಿನ ಸೀಸನ್​ನಲ್ಲಿ ನೀರಸ ಪ್ರದರ್ಶನ ತೋರುತ್ತಿದ್ದ ತಂಡ ಹೊಸ ಆಟಗಾರರನ್ನು ಸೇರಿಸಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೆ, ಹಾಲಿ ಚಾಂಪಿಯನ್, ಮಾಜಿ ಚಾಂಪಿಯನ್ ತಂಡಗಳು ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿದೆ. ಇದರ ನಡುವೆ ಎರಡು ಹೊಸ ತಂಡಗಳಾದ ಗುಜರಾತ್ ಮತ್ತು ಲಖನೌ ಕೂಡ ನಿರೀಕ್ಷೆ ಹುಟ್ಟಿಸಿದೆ. ಹಾರ್ದಿಕ್ ಪಡೆ 14 ಅಂಕದೊಂದಿಗೆ ಪ್ಲೇ ಆಫ್ ಹಾದಿ ಖಚಿತ ಪಡಿಸಿದೆ. ಈ ಬಾರಿ ಅತಿ ಹೆಚ್ಚು ರನ್ ಕಲೆಹಾಕಿದವರಿಗೆ ಆರೆಂಜ್ ಕ್ಯಾಪ್, ಅತಿ ಹೆಚ್ಚು ವಿಕೆಟ್ ಕಿತ್ತವರು ಪರ್ಪಲ್ ಕ್ಯಾಪ್ ಧರಿಸುತ್ತಾರೆ. ಹಾಗಾದ್ರೆ ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ನೋಡೋಣ.

ಪಾಯಿಂಟ್ ಟೇಬಲ್:

  • ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಅಗ್ರಸ್ಥಾನದಲ್ಲಿ ಭದ್ರವಾಗಿದೆ. ಆಡಿದ ಎಂಟು ಪಂದ್ಯಗಳ ಪೈಕಿ ಕೇವಲ ಒಂದರಲ್ಲಿ ಸೋಲು, ಏಳರಲ್ಲಿ ಗೆಲುವು ಕಂಡು 14 ಅಂಕದೊಂದಿಗೆ ಪ್ಲೇ ಆಫ್ ಪ್ರವೇಶಿಸುವುದು ಪಕ್ಕಾ ಆಗಿದೆ. ಗುಜರಾತ್ ನಿವ್ವಳ ರನ್ ರೇಟ್ +0.371 ಆಗಿದೆ.
  • ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ರಾಯಲ್ಸ್ ತಂಡ ಎರಡನೇ ಸ್ಥಾನದಲ್ಲಿದೆ. ಇವರು ಆಡಿದ ಎಂಟು ಪಂದ್ಯಗಳ ಪೈಕಿ ಆರರಲ್ಲಿ ಗೆಲುವು ಎರಡರಲ್ಲಿ ಸೋಲುಂಡು ಒಟ್ಟು 12 ಅಂಕ ಸಂಪಾದಿಸಿದೆ. ಆರ್​ಆರ್​ +0.561 ರನ್​​ರೇಟ್ ಹೊಂದಿದೆ.
  • ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ಒಂದು ಸ್ಥಾನ ಕುಸಿದು ಮೂರನೇ ಸ್ಥಾನದಲ್ಲಿದೆ. ಆಡಿದ ಎಂಟು ಪಂದ್ಯಗಳಲ್ಲಿ ಐದರಲ್ಲಿ ಜಯ ಸಾಧಿಸಿ 10 ಅಂಕ ಸಂಪಾದಿಸಿ 0.600 ರನ್ ರೇಟ್ ಹೊಂದಿದೆ.
  • ಹೊಸ ತಂಡವಾದ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ಆಡಿದ ಎಂಟು ಪಂದ್ಯಗಳ ಪೈಕಿ ಐದರಲ್ಲಿ ಗೆದ್ದು ನಾಲ್ಕನೇ ಸ್ಥಾನದಲ್ಲಿದೆ. ಒಟ್ಟು 10 ಅಂಕದೊಂದಿಗೆ ಲಖನೌದ ನಿವ್ವಳ ರನ್ ರೇಟ್ 0.334.
  • ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐದನೇ ಸ್ಥಾನದಲ್ಲಿದ್ದು, ಆಡಿದ ಒಂಬತ್ತು ಪಂದ್ಯಗಳಲ್ಲಿ ನಾಲ್ಕರಲ್ಲಿ ಸೋಲು ಐದರಲ್ಲಿ ಗೆದ್ದು ಬೀಗಿದೆ.  ಹತ್ತು ಅಂಕದೊಂದಿಗೆ RCB ನಿವ್ವಳ ರನ್ ರೇಟ್ -0.572 ಆಗಿದೆ.
  • ಮಯಾಂಕ್ ಅಗರ್ವಾಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡ ಎಂಟನೇ ಸ್ಥಾನದಿಂದ ಆರನೇ ಸ್ಥಾನಕ್ಕೇರಿದೆ. 8 ಅಂಕದೊಂದಿಗೆ ಪಂಜಾಬ್ ನಿವ್ವಳ ರನ್ ರೇಟ್ -0.419 ಆಗಿದೆ.
  • ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಡೆಲ್ಲಿಯ ನಿವ್ವಳ ರನ್ ರೇಟ್ 0.715 ಆಗಿದೆ.
  • ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಎಂಟನೇ ಸ್ಥಾನದಲ್ಲಿದೆ. ಆಡಿದ ಎಂಟು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು, ಐದರಲ್ಲಿ ಸೋಲು ಕಂಡು ಒಟ್ಟು 6 ಅಂಕದೊಂದಿಗೆ +0.080 ರನ್​​ರೇಟ್​ ಹೊಂದಿದೆ.
  • ಇತ್ತ ಆಡಿದ ಎಂಟು ಪಂದ್ಯಗಳ ಪೈಕಿ 6 ರಲ್ಲಿ ಸೋಲು ಎರಡರಲ್ಲಿ ಗೆಲುವು ಕಂಡಿರುವ ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 4 ಅಂಕದೊಂದಿಗೆ -0.538 ರನ್​ರೇಟ್​​ ಹೊಂದಿ ಒಂಬತ್ತನೇ ಸ್ಥಾನದಲ್ಲಿದೆ.
  • ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿದೆ. ಆಡಿದ ಎಂಟು ಪಂದ್ಯದಲ್ಲಿ ಸೋಲುಂಡಿದೆ. ಮುಂಬೈ ನಿವ್ವಳ ರನ್ ರೇಟ್ -1.000

ಆರೆಂಜ್ ಕ್ಯಾಪ್:

ಅತಿ ಹೆಚ್ಚು ರನ್ ಗಳಿಸಿದವರ ಮೊದಲ ಸ್ಥಾನದಲ್ಲಿ ಆರ್​ ಆರ್​ ತಂಡದ ಜೋಸ್ ಬಟ್ಲರ್ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರ ಪಡಿಸಿಕೊಂಡಿದ್ದು ಮೂರು ಶತಕದೊಂದಿಗೆ ಇವರು ಎಂಟು ಪಂದ್ಯಗಳಿಂದ 499 ರನ್ ಕಲೆಹಾಕಿ ಆರೆಂಜ್ ಕ್ಯಾಪ್ ತೊಟ್ಟಿದ್ದಾರೆ. ಲಖನೌ ತಂಡದ ನಾಯಕ ಕೆಎಲ್ ರಾಹುಲ್ ಎರಡನೇ ಸ್ಥಾನಕ್ಕೆ ಜಿಗಿದಿದ್ದು ಇವರು 368 ರನ್ ಗಳಿಸಿದ್ದಾರೆ. ಮೂರನೇ ಸ್ಥಾನದಲ್ಲಿ ಗುಜರಾತ್ ನಾಯಕ ಹಾರ್ದಿಕ್ ಪಾಂಡ್ಯ ಅವರಿದ್ದು7 ಪಂದ್ಯಗಳಿಂದ 305 ರನ್ ಸಿಡಿಸಿದ್ದಾರೆ. ಪಂಜಾಬ್ ತಂಡದ ಶಿಖರ್ ಧವನ್ 8 ಪಂದ್ಯಗಳಿಂದ 302 ರನ್ ಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಎಸ್​ಆರ್​ಹೆಚ್ ತಂಡದ ಅಭಿಷೇಕ್ ಶರ್ಮಾ ಆಡಿದ ಎಂಟು ಪಂದ್ಯಗಳಿಂದ 285 ರನ್ ಸಿಡಿಸಿ ಐದನೇ ಸ್ಥಾನದಲ್ಲಿದ್ದಾರೆ.

ಪರ್ಪಲ್ ಕ್ಯಾಪ್:

ಇನ್ನು ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಯುಜ್ವೇಂದ್ರ ಚಹಲ್ ಟಾಪ್​ನಲ್ಲಿದ್ದಾರೆ. ಇವರು ಆಡಿದ ಎಂಟು ಪಂದ್ಯಗಳಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದು 18 ವಿಕೆಟ್ ಕಬಳಿಸಿದ್ದಾರೆ. ಉಮ್ರಾನ್ ಮಲಿಕ್ ಎರಡನೇ ಸ್ಥಾನಕ್ಕೆ ಜಿಗಿದಿದ್ದು ಎಂಟು ಪಂದ್ಯಗಳಿಂದ 15 ವಿಕೆಟ್ ಕಿತ್ತಿದ್ದಾರೆ. ಇವರ ಜೊತೆಗೆ ಟಿ. ನಟರಾಜನ್ ಕೂಡ ಎಂಟು ಪಂದ್ಯಗಳಿಂದ 15 ವಿಕೆಟ್ ಪಡೆದು ಮೂರನೇ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ಡ್ವೇನ್ ಬ್ರಾವೋ ಇದ್ದು ಎಂಟು ಪಂದ್ಯಗಳಿಂದ 14 ವಿಕೆಟ್ ತಮ್ಮದಾಗಿಸಿದ್ದಾರೆ. ಎಂಟು ಪಂದ್ಯಗಳಿಂದ 13 ವಿಕೆಟ್ ಪಡೆದಿರುವ ಮೊಹಮ್ಮದ್ ಶಮಿ 5ನೇ ಸ್ಥಾನದಲ್ಲಿದ್ದಾರೆ.

DC vs KKR: ಐಪಿಎಲ್​​ನಲ್ಲಿಂದು ಹೈವೋಲ್ಟೇಜ್ ಕದನ: ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಳ್ಳುತ್ತ ಕೆಕೆಆರ್

Hardik Pandya: ರೋಚಕ ಪಂದ್ಯ ಮುಗಿದ ಬಳಿಕ ಹಾರ್ದಿಕ್-ರಶೀದ್ ಖಾನ್ ಆಡಿದ ಮಾತುಗಳೇನು ಕೇಳಿ

TV9 Kannada


Leave a Reply

Your email address will not be published.