
ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್
IPL 2022 Qualifier 2: 1.32 ಲಕ್ಷ ಸಾಮರ್ಥ್ಯದ ನರೇಂದ್ರ ಮೋದಿ ಸ್ಟೇಡಿಯಂ ಇಂಡಿಯನ್ ಪ್ರೀಮಿಯರ್ ಲೀಗ್ ಕ್ವಾಲಿಫೈಯರ್ 2 ಮತ್ತು ಐಪಿಎಲ್ ಫೈನಲ್ ಪಂದ್ಯಗಳನ್ನು ಆಯೋಜಿಸಲು ಸಿದ್ಧವಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕ್ವಾಲಿಫೈಯರ್ 2 ಪಂದ್ಯಕ್ಕೆ ಪ್ರವೇಶ ಸಂಜೆ 4 ಗಂಟೆಯಿಂದ ಆರಂಭವಾಗಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) ಅಂತಿಮ ಹಂತವನ್ನು ತಲುಪಿದೆ. ಶುಕ್ರವಾರ ಸಂಜೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ( Narendra Modi Stadium)ನಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Rajasthan Royals and Royal Challengers Bangalore) ನಡುವಿನ ಲೀಗ್ ಕ್ವಾಲಿಫೈಯರ್ 2 ಪಂದ್ಯ ನಡೆಯಲಿದೆ. ಈ ರೋಚಕ ಪಂದ್ಯವನ್ನು ವೀಕ್ಷಿಸಲು ಅಹಮದಾಬಾದ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಮತ್ತು ನಗರಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. 1.32 ಲಕ್ಷ ಸಾಮರ್ಥ್ಯದ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಕ್ವಾಲಿಫೈಯರ್ 2, ನಂತರ ಅಂತಿಮ ಪಂದ್ಯವನ್ನು ಆಯೋಜಿಸಲು ಸಿದ್ಧವಾಗಿದೆ. ಕ್ರಿಕೆಟ್ ಅಭಿಮಾನಿಗಳು ಮತ್ತು ವಿಶೇಷವಾಗಿ ಅಹಮದಾಬಾದ್ ಜನರು ಈ ಎರಡು ಪಂದ್ಯಗಳನ್ನು ವೀಕ್ಷಿಸಲು ಹೆಚ್ಚಿನ ಉತ್ಸಾಹವನ್ನು ತೊರುತ್ತಿದ್ದಾರೆ. ಕ್ವಾಲಿಫೈಯರ್ 2 ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದ್ದು, ಮೇ 29ರಂದು ನಡೆಯಲಿರುವ ಫೈನಲ್ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.
ಈ ಲೀಗ್ನಲ್ಲಿ ಮೊದಲ ಬಾರಿಗೆ ಆಡುತ್ತಿರುವ ಗುಜರಾತ್ ಟೈಟಾನ್ಸ್ ತಂಡ ಫೈನಲ್ಗೆ ತಲುಪಿರುವುದು ಮುಖ್ಯವಾಗಿದೆ. ಹಾಗಾಗಿ ಗುಜರಾತ್ ರಾಜ್ಯದ ಮತ್ತು ವಿಶೇಷವಾಗಿ ಅಹಮದಾಬಾದ್ ನಿವಾಸಿಗಳಲ್ಲಿ ಈ ಲೀಗ್ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ರಾಜಸ್ಥಾನ ಮತ್ತು ಬೆಂಗಳೂರು (RR vs RCB) ನಡುವಿನ ಕ್ವಾಲಿಫೈಯರ್ 2 ಪಂದ್ಯದ ವಿಜೇತರು ಪ್ರಶಸ್ತಿಗಾಗಿ ಮೇ 29 ರಂದು ಫೈನಲ್ನಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಎದುರಿಸಲಿದ್ದಾರೆ.