IPL 2022: RCBಗೆ ಹ್ಯಾಟ್ರಿಕ್ ಗೆಲುವು ಅನಿವಾರ್ಯ..! | IPL 2022: Rcb’s Upcoming Matches 2022


IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ.

IPL 2022: ಸತತ ಮೂರು ಸೋಲುಗಳ ಬಳಿಕ ಆರ್​ಸಿಬಿ (RCB) ಕೊನೆಗೂ ಗೆಲುವಿನ ಲಯಕ್ಕೆ ಮರಳಿದೆ. ಅದು ಕೂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ (CSK)​ ತಂಡವನ್ನು ಮಣಿಸಿ ಎಂಬುದು ವಿಶೇಷ. ಏಕೆಂದರೆ ಇದೇ ಸಿಎಸ್​ಕೆ ವಿರುದ್ದ ಆರ್​ಸಿಬಿ ಮೊದಲಾರ್ಧದ ಪಂದ್ಯದಲ್ಲಿ ಸೋತಿತ್ತು. ಆದರೆ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 13 ರನ್​ಗಳಿಂದ ಸೋಲಿಸಿ 2 ಅಂಕ ಸಂಪಾದಿಸಿದೆ. ಇದರೊಂದಿಗೆ 11 ಪಂದ್ಯಗಳಲ್ಲಿ 12 ಅಂಕ ಪಡೆದು ಆರ್​ಸಿಬಿ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನಕ್ಕೇರಿದೆ. ಇದಾಗ್ಯೂ ಆರ್​ಸಿಬಿ ತಂಡದ ಪ್ಲೇಆಫ್ ಇನ್ನೂ ಖಚಿತವಾಗಿಲ್ಲ. ಏಕೆಂದರೆ ಈಗಾಗಲೇ ಗುಜರಾತ್ ಟೈಟನ್ಸ್ 16 ಅಂಕ ಪಡೆದಿದ್ದರೆ, ಲಕ್ನೋ ಸೂಪರ್ ಜೈಂಟ್ಸ್ 14 ಅಂಕ ಪಡೆದುಕೊಂಡಿದೆ. ಇನ್ನು ಆರ್​ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ 12 ಅಂಕ ಪಡೆದುಕೊಂಡಿದೆ. ಇನ್ನುಳಿದಂತೆ ಪಂಜಾಬ್ ಕಿಂಗ್ಸ್​ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ಸಹ 10 ಪಡೆದುಕೊಂಡಿದೆ.

ಇಲ್ಲಿ ಗಮನಿಸಬೇಕಾದ ಮಹತ್ವದ ಅಂಶವೆಂದರೆ ಆರ್​ಸಿಬಿ ತಂಡವು ಈಗಾಗಲೇ 11 ಪಂದ್ಯಗಳನ್ನಾಡಿರುವುದು. ಅಂದರೆ ಎಸ್​ಆರ್​ಹೆಚ್ ತಂಡವು ಕೇವಲ 9 ಪಂದ್ಯವಾಡಿ 10 ಪಾಯಿಂಟ್ಸ್ ಪಡೆದುಕೊಂಡಿದೆ. ಹಾಗೆಯೇ ಪಂಜಾಬ್ ಕಿಂಗ್ಸ್​ 10 ಪಂದ್ಯಗಳಿಂದ 10 ಅಂಕ ಪಡೆದಿದೆ. ಹೀಗಾಗಿ ಈ ಎರಡು ತಂಡಗಳು ಕೂಡ ಪ್ಲೇಆಫ್ ರೇಸ್​ನಲ್ಲಿರುವುದು ಸ್ಪಷ್ಟ.

ಮತ್ತೊಂದೆಡೆ ಆರ್​ಸಿಬಿಗೆ ಇನ್ನುಳಿದಿರುವುದು ಕೇವಲ 3 ಮ್ಯಾಚ್​ಗಳು ಮಾತ್ರ. ಹೀಗಾಗಿ ಈ ಪಂದ್ಯಗಳನ್ನು ಗೆದ್ದು ನೇರವಾಗಿ ಪ್ಲೇಆಫ್ ಅನ್ನು ಖಚಿತಪಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಏಕೆಂದರೆ ಮುಂದಿನ ಮೂರು ಮ್ಯಾಚ್​ಗಳನ್ನು ಗೆದ್ದರೆ ಆರ್​ಸಿಬಿ ತಂಡದ ಪಾಯಿಂಟ್ 18 ಆಗಲಿದೆ. ಇದರಿಂದ 3ನೇ ಅಥವಾ 4ನೇ ಸ್ಥಾನವನ್ನು ಖಚಿತಪಡಿಸಿಕೊಳ್ಳಬಹುದು.

ಅದರಂತೆ ಮೇ 8 ರಂದು ಆರ್​ಸಿಬಿ ಎಸ್​ಆರ್​ಹೆಚ್ ವಿರುದ್ದ ಆಡಲಿದೆ​. ಈ ಪಂದ್ಯದಲ್ಲಿ ಆರ್​ಸಿಬಿ ಗೆಲ್ಲಲೇಬೇಕು. ಏಕೆಂದರೆ ಎಸ್​ಆರ್​ಹೆಚ್​ ಕೂಡ ಪ್ಲೇಆಫ್ ರೇಸ್​ನಲ್ಲಿರುವ ಕಾರಣ ಈ ಗೆಲುವು ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯನ್ನು ಸುಗಮಗೊಳಿಸಲಿದೆ. ಇನ್ನು ಮೇ 13 ರಂದು ಪಂಜಾಬ್ ಕಿಂಗ್ಸ್ ವಿರುದ್ದ ಆಡಬೇಕಿದೆ. ವಿಶೇಷ ಎಂದರೆ ಆರ್​ಸಿಬಿ ಈ ಬಾರಿ ಪಂಜಾಬ್ ಕಿಂಗ್ಸ್​ ವಿರುದ್ದ ಸೋಲುವ ಮೂಲಕ ಐಪಿಎಲ್​ ಅಭಿಯಾನ ಆರಂಭಿಸಿತ್ತು. ಇದೀಗ ಪಂಜಾಬ್ ಕಿಂಗ್ಸ್ ಕೂಡ ಪ್ಲೇಆಫ್​ ರೇಸ್​ನಲ್ಲಿರುವ ಕಾರಣ, ಆರ್​ಸಿಬಿ ತಂಡವು ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಪಂಜಾಬ್ ಕಿಂಗ್ಸ್ ತಂಡವನ್ನು ಪ್ಲೇಆಫ್ ರೇಸ್​ನಿಂದ ಹಿಂದಿಕ್ಕಬಹುದು.

ಹಾಗೆಯೇ ಮೇ 19 ರಂದು ನಡೆಯಲಿರುವ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ಗುಜರಾತ್ ಟೈಟನ್ಸ್ ವಿರುದ್ದ ಆಡಲಿದೆ. ಈಗಾಗಲೇ ಪ್ಲೇಆಫ್ ಹಾದಿಯನ್ನು ಬಹುತೇಕ ಖಚಿತಪಡಿಸಿಕೊಂಡಿರುವ ಗುಜರಾತ್ ವಿರುದ್ದದ ಗೆಲುವು ಆರ್​ಸಿಬಿ ತಂಡದ ಪ್ಲೇಆಫ್ ಅನ್ನು ಕನ್​ಫರ್ಮ್ ಮಾಡಲಿದೆ. ಏಕೆಂದರೆ ಪ್ಲೇಆಫ್ ರೇಸ್​ನಲ್ಲಿ ಬಹುತೇಕ ತಂಡಗಳಿರುವ ಕಾರಣ ಗುಜರಾತ್ ಟೈಟನ್ಸ್ ವಿರುದ್ದ ಭರ್ಜರಿಯಾಗಿ ಗೆಲ್ಲುವ ಮೂಲಕ ಆರ್​ಸಿಬಿ ನೆಟ್​ ರನ್​ ರೇಟ್ ಅನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಹೀಗಾಗಿ ಗುಜರಾತ್ ಟೈಟನ್ಸ್ ವಿರುದ್ದದ ಪಂದ್ಯವು ಆರ್​ಸಿಬಿ ಪಾಲಿಗೆ ನಿರ್ಣಾಯಕ ಎಂದೇ ಹೇಳಬಹುದು. ಒಟ್ಟಿನಲ್ಲಿ ಮುಂದಿನ ಮೂರು ಪಂದ್ಯಗಳಲ್ಲಿ ಹ್ಯಾಟ್ರಿಕ್ ಗೆಲುವು ದಾಖಲಿಸಿದರೆ ಆರ್​ಸಿಬಿ ಪ್ಲೇಆಫ್ ಆಡುವುದು ಖಚಿತವಾಗಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

TV9 Kannada


Leave a Reply

Your email address will not be published. Required fields are marked *