IPL 2022: RCB ಉಳಿಸಿಕೊಳ್ಳುವ ಆಟಗಾರರನ್ನು ಹೆಸರಿಸಿದ ಆಕಾಶ್ ಚೋಪ್ರಾ | Aakash Chopra Picks Players RCB May Retain Ahead of IPL 2022

IPL 2022: RCB ಉಳಿಸಿಕೊಳ್ಳುವ ಆಟಗಾರರನ್ನು ಹೆಸರಿಸಿದ ಆಕಾಶ್ ಚೋಪ್ರಾ

RCB

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ (IPL 2022) ಮೆಗಾ ಹರಾಜಿನ ಸಿದ್ಧತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳಿಗೂ ರಿಟೈನ್ ಮಾಡಿಕೊಳ್ಳುವ ಆಟಗಾರರ ಪಟ್ಟಿಯನ್ನು ಸಲ್ಲಿಸುವಂತೆ ಐಪಿಎಲ್ (IPL) ಆಡಳಿತ ಮಂಡಳಿ ಸೂಚಿಸಿದೆ. ಈ ಸೂಚನೆ ಬೆನ್ನಲ್ಲೇ ಇತ್ತ ಯಾವ ತಂಡ ಯಾರನ್ನು ಉಳಿಸಿಕೊಳ್ಳಲಿದೆ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಈ ಚರ್ಚೆಗಳ ನಡುವೆ ಆರ್​ಸಿಬಿ (RCB) ತಂಡ ಉಳಿಸಿಕೊಳ್ಳುವ ಆಟಗಾರರ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾದ (Team India) ಮಾಜಿ ಆಟಗಾರ ಆಕಾಶ್ ಚೋಪ್ರಾ, ರಾಯಲ್ ಚಾಲೆಂಜರ್ಸ್​ ಬೆಂಗಳೂರು ನಾಲ್ವರು ಆಟಗಾರರನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದಿದ್ದಾರೆ.

ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಇಬ್ಬರನ್ನು ರಿಟೈನ್ ಮಾಡಿಕೊಳ್ಳುವುದು ಖಚಿತ. ಅದರಂತೆ ಆರ್​ಸಿಬಿ ತಂಡದ ಮೊದಲ ಆಯ್ಕೆ ವಿರಾಟ್ ಕೊಹ್ಲಿ ಆಗಲಿದ್ದಾರೆ. ಇನ್ನು 2ನೇ ಆಯ್ಕೆ ಯುಜುವೇಂದ್ರ ಚಹಲ್. ಇನ್ನು 3ನೇ ಆಟಗಾರನನ್ನು ಉಳಿಸಿಕೊಂಡರೆ ಅದು ದೇವದತ್ ಪಡಿಕ್ಕಲ್ ಆಗಲಿದ್ದಾರೆ. ಹಾಗೆಯೇ ನಾಲ್ಕನೇ ಆಟಗಾರನ ಆಯ್ಕೆ ಮೊಹಮ್ಮದ್ ಸಿರಾಜ್. ಹಾಗೆಯೇ ಈ ಪಟ್ಟಿಯಲ್ಲಿ ಹರ್ಷಲ್ ಪಟೇಲ್ ಕೂಡ ಇದ್ದಾರೆ. ಸಿರಾಜ್ ಹಾಗೂ ಹರ್ಷಲ್ ವೇಗಿಗಳಾಗಿರುವುದರಿಂದ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಇದಾಗ್ಯೂ ಆಕಾಶ್ ಚೋಪ್ರಾ ಆರ್​ಸಿಬಿ ತಂಡವು ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಉಳಿಸಿಕೊಳ್ಳುವುದಿಲ್ಲ ಎಂದಿದ್ದಾರೆ. ಮ್ಯಾಕ್ಸ್​ವೆಲ್ ಚೆನ್ನಾಗಿ ಆಡುತ್ತಿದ್ದಾರೆ. ಆದರೆ ಅವರು ಆ ಫಾರ್ಮ್​ ಅನ್ನು ಮುಂದುವರೆಸುತ್ತಾರಾ ಎಂಬುದರ ಬಗ್ಗೆ ನಂಬಿಕೆ ಇಲ್ಲ. ಹೀಗಾಗಿ ನನ್ನ ಪ್ರಕಾರ ಆರ್​ಸಿಬಿ ಅವರನ್ನು ಉಳಿಸಿಕೊಳ್ಳುವುದಿಲ್ಲ ಎಂದು ಭಾವಿಸುತ್ತೇನೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

ಐಪಿಎಲ್​ 2021ರಲ್ಲಿ ಆರ್​ಸಿಬಿ ಪರ ಬೆಸ್ಟ್​ ಫರ್ಫಾಮರ್ ಎನಿಸಿಕೊಂಡಿದ್ದ ಗ್ಲೆನ್​ ಮ್ಯಾಕ್ಸ್​ವೆಲ್ ಒಟ್ಟು 513 ರನ್ ಬಾರಿಸಿದ್ದರು. ಅಷ್ಟೇ ಅಲ್ಲದೆ ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ 5ನೇ ಬ್ಯಾಟರ್ ಎನಿಸಿಕೊಂಡಿದ್ದರು. ಇದಾಗ್ಯೂ ಆರ್​ಸಿಬಿ ತಂಡ ಗ್ಲೆನ್ ಮ್ಯಾಕ್ಸ್​ವೆಲ್​ ಅವರನ್ನು ಉಳಿಸಿಕೊಳ್ಳುವುದು ಡೌಟ್ ಎಂದಿದ್ದಾರೆ ಆಕಾಶ್ ಚೋಪ್ರಾ.

ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ಇದನ್ನೂ ಓದಿ: Rahul Dravid: ರಾಹುಲ್ ದ್ರಾವಿಡ್ ಹಾಗೂ ರವಿ ಶಾಸ್ತ್ರಿ ನಡುವಣ ವ್ಯತ್ಯಾಸ ತಿಳಿಸಿದ ಗೌತಮ್ ಗಂಭೀರ್

TV9 Kannada

Leave a comment

Your email address will not be published. Required fields are marked *