
Image Credit source: ANI
ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ರಾಂಬನ್ ಮತ್ತು ರಾಮ್ಸು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದ ಕುಸಿತವಾಗಿದೆ. ಇದರಲ್ಲಿ ಓರ್ವ ಸಾವನ್ನಪ್ಪಿದ್ದಾರೆ.
ಶ್ರೀನಗರ: ರಾಂಬನ್ ಜಿಲ್ಲೆಯ ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ (Jammu- Srinagar National High Way) ಮೇ 19ರಂದು ನಿರ್ಮಾಣ ಹಂತದಲ್ಲಿದ್ದ ನಾಲ್ಕು ಪಥದ ಸುರಂಗದ ಒಂದು ಭಾಗವು ಕುಸಿದು ಬಿದ್ದಿದೆ. ಈ ಘಟನೆಯಲ್ಲಿ ಸುರಂಗದ ಅವಶೇಷಗಳಡಿ 10 ಜನರು ಸಿಕ್ಕಿಬಿದ್ದಿದ್ದಾರೆ, ಓರ್ವ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ (Rescue Operation) ಇನ್ನೂ ನಡೆಯುತ್ತಿದೆ ಮತ್ತು ಸಿಕ್ಕಿಬಿದ್ದ ವ್ಯಕ್ತಿಗಳನ್ನು ತಲುಪಲು ರಾಕ್ ಬ್ರೇಕರ್ಗಳನ್ನು ಬಳಸಲಾಗುತ್ತಿರುವುದರಿಂದ ಇನ್ನೂ ಸ್ವಲ್ಪ ಸಮಯ ತೆಗೆದುಕೊಳ್ಳುವ ಸಾಧ್ಯತೆಯಿದೆ. ಗಾಯಗೊಂಡ ಮೂವರಲ್ಲಿ ಒಬ್ಬರನ್ನು ಜಮ್ಮುವಿನ ಜಿಎಂಸಿಗೆ ಸ್ಥಳಾಂತರಿಸಲಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ರಾಂಬನ್ ಮತ್ತು ರಾಮ್ಸು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗದ ಕುಸಿತವಾಗಿರುವುದು ದುರದೃಷ್ಟಕರ ಘಟನೆ. ನಾನು ಡಿಸಿ ಮುಸ್ರತ್ ಇಸ್ಲಾಂ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಸುಮಾರು 10 ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ. ಇನ್ನಿಬ್ಬರನ್ನು ರಕ್ಷಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ನಾಗರಿಕ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಈ ಘಟನೆಯ ಬಗ್ಗೆ ವಿವರಗಳನ್ನು ಹಂಚಿಕೊಂಡಿದ್ದಾರೆ.
#WATCH Rescue operation underway at tunnel collapse site on Jammu–Srinagar National Highway in the Makerkote area of Ramban, Jammu where a part of under-construction tunnel collapsed late last night
As per Ramban DC, a body was recovered while 9 are still trapped in the debris pic.twitter.com/1P11K72ImD
— ANI (@ANI) May 20, 2022