ಮೈಸೂರು: ಮೈಸೂರು ಭಾಗದಲ್ಲಿ ಜೆಡಿಎಸ್ನಿಂದ ಮತ್ತೊಂದು ವಿಕೆಟ್ ಪತನಗೊಳ್ಳೋದು ಖಾತ್ರಿಯಾಗಿದೆ. ಇನ್ನೂ ಮೂರು ದಿನದಲ್ಲಿ ಜೆಡಿಎಸ್ಗೆ ಅಧಿಕೃತವಾಗಿ ರಾಜೀನಾಮೆ ಕೊಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು.. ಮೈಸೂರಿನ ಬಿಜೆಪಿ ಕಚೇರಿಯಲ್ಲೇ ಬಿಜೆಪಿ ಸೇರ್ಪಡೆಯಾಗುತ್ತೇನೆ. ಬಿಜೆಪಿ ಸೇರುವ ದಿನ ನಾನು ಯಾಕೆ ಜೆಡಿಎಸ್ ಬಿಟ್ಟೆ ಎಂಬುದನ್ನು ಸುದ್ದಿಗೋಷ್ಠಿ ಮಾಡಿ ವಿವರಿಸುತ್ತೇನೆ. ನನ್ನ ಅಗತ್ಯ ಹೆಚ್.ಡಿ ಕುಮಾರಸ್ವಾಮಿಗೆ ಇದ್ದಂತಿಲ್ಲ. ಅಗತ್ಯವಿಲ್ಲದ ಕಡೆ ನಾನು ಯಾಕೆ ಇರಬೇಕು ಎಂದು ಪ್ರಶ್ನೆ ಮಾಡಿದರು.
ಕಳೆದ ಮೂರು ವರ್ಷಗಳಿಂದ ನಾನು ಮಾನಸಿಕವಾಗಿ ಬಿಜೆಪಿಯಲ್ಲೇ ಇದ್ದೇನೆ. ದೈಹಿಕವಾಗಿ ಅಷ್ಟೆ ಜೆಡಿಎಸ್ನಲ್ಲಿದ್ದೆ. ವಿಧಾನ ಪರಿಷತ್ ಒಳಗೂ ನಾನು ಬಿಜೆಪಿ ಪರವೇ ಬಿಲ್ಗಳಿಗೆ ಕೈಎತ್ತಿದ್ದೇನೆ. ಮೂರು ವರ್ಷದಿಂದ ನಾನು ಜೆಡಿಎಸ್ ನಾಯಕರ ಸಂರ್ಪಕದಲ್ಲಿ ಇಲ್ಲ. ನನಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದರು.
The post JDSಗೆ ಮತ್ತೊಂದು ಆಘಾತ; ಮೈಸೂರು ಭಾಗದಲ್ಲಿ ಮತ್ತೊಂದು ಪ್ರಭಾವಿ ವಿಕೆಟ್ ಪತನ appeared first on News First Kannada.