Kane Williamson Equals Sachin Tendulkar’s Record | Kane Williamson: ಸಚಿನ್, ಸೆಹ್ವಾಗ್ ದಾಖಲೆ ಸರಿಗಟ್ಟಿದ ಕೇನ್ ವಿಲಿಯಮ್ಸನ್

TV9 Digital Desk

| Edited By: Zahir Yusuf

Updated on:Mar 18, 2023 | 8:34 PM

Kane Williamson Records: ಇನಿಂಗ್ಸ್ ಆರಂಭಿಸಿದ ಲಾಥಮ್ (21) ಬೇಗನೆ ಔಟಾದರೆ, ಡೆವೊನ್ ಕಾನ್ವೆ 78 ರನ್​ ಗಳಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೇನ್ ವಿಲಿಯಮ್ಸನ್ 215 ರನ್​ ಬಾರಿಸಿದರು.

Mar 18, 2023 | 8:34 PM

ವೆಲ್ಲಿಂಗ್ಟನ್​ನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಬ್ಯಾಟರ್ ಕೇನ್ ವಿಲಿಯಮ್ಸನ್ ಭರ್ಜರಿ ದ್ವಿಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತ ನ್ಯೂಜಿಲೆಂಡ್ ತಂಡಕ್ಕೆ ಶ್ರೀಲಂಕಾ ಮೊದಲು ಬ್ಯಾಟ್ ಮಾಡುವ ಅವಕಾಶ ನೀಡಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಲಾಥಮ್ (21) ಬೇಗನೆ ಔಟಾದರೆ, ಡೆವೊನ್ ಕಾನ್ವೆ 78 ರನ್​ ಗಳಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೇನ್ ವಿಲಿಯಮ್ಸನ್ 296 ಎಸೆತಗಳಲ್ಲಿ 23 ಫೋರ್ ಹಾಗೂ 2 ಸಿಕ್ಸ್​ ಒಳಗೊಂಡಂತೆ 215 ರನ್​ ಬಾರಿಸಿದರು.

ವಿಶೇಷ ಎಂದರೆ ಈ ಡಬಲ್ ಸೆಂಚುರಿಯೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ದ್ವಿಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ವಿಲಿಯಮ್ಸನ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಹಾಗೂ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಿದ್ದರು.

ಸಚಿನ್ ತೆಂಡೂಲ್ಕರ್ 329 ಟೆಸ್ಟ್ ಇನಿಂಗ್ಸ್​ಗಳಲ್ಲಿ ಒಟ್ಟು 6 ಬಾರಿ ದ್ವಿಶತಕದ ಸಾಧನೆ ಮಾಡಿದ್ದಾರೆ. ಇನ್ನು ವೀರೇಂದ್ರ ಸೆಹ್ವಾಗ್ 180 ಇನಿಂಗ್ಸ್​ಗಳಲ್ಲಿ 6 ಡಬಲ್ ಸೆಂಚುರಿ ಸಿಡಿಸಿದ್ದರು. ಹಾಗೆಯೇ ರಿಕಿ ಪಾಂಟಿಂಗ್ 287 ಟೆಸ್ಟ್ ಇನಿಂಗ್ಸ್​ಗಳಲ್ಲಿ 6 ಬಾರಿ ದ್ವಿಶತಕ ಬಾರಿಸಿ ಮಿಂಚಿದ್ದರು.

ಇದೀಗ ಕೇನ್ ವಿಲಿಯಮ್ಸನ್ 164 ಟೆಸ್ಟ್ ಇನಿಂಗ್ಸ್​ಗಳಲ್ಲಿ 6 ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ಸಚಿನ್, ಸೆಹ್ವಾಗ್, ಪಾಂಟಿಂಗ್ ದಾಖಲೆಗಳನ್ನು ಸರಿಗಟ್ಟಿದ್ದಾರೆ.

ಇನ್ನು ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಧಿಕ ಡಬಲ್ ಸೆಂಚುರಿ ಸಿಡಿಸಿದ ವಿಶ್ವ ದಾಖಲೆ ಕ್ರಿಕೆಟ್ ದಂತಕಥೆ ಡಾನ್ ಬ್ರಾಡ್ಮನ್ ಹೆಸರಿನಲ್ಲಿದೆ. ಆಸ್ಟ್ರೇಲಿಯಾದ ಮಾಜಿ ಆಟಗಾರ 80 ಇನಿಂಗ್ಸ್​ಗಳಲ್ಲಿ ಒಟ್ಟು 12 ಬಾರಿ ದ್ವಿಶತಕ ಬಾರಿಸಿ ಮಿಂಚಿದ್ದರು. 2ನೇ ಸ್ಥಾನದಲ್ಲಿ ಕುಮಾರ ಸಂಗಾಕ್ಕರ (11 ದ್ವಿಶತಕ) ಹಾಗೂ 3ನೇ ಸ್ಥಾನದಲ್ಲಿ ಬ್ರಿಯಾನ್ ಲಾರಾ (9 ದ್ವಿಶತಕ) ಇದ್ದಾರೆ.

ಹಾಗೆಯೇ 183 ಟೆಸ್ಟ್ ಇನಿಂಗ್ಸ್​ಗಳಲ್ಲಿ ಒಟ್ಟು 7 ಬಾರಿ ದ್ವಿಶತಕ ಸಿಡಿಸಿರುವ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಡಬಲ್ ಸೆಂಚುರಿ ಸರದಾರರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿ

Most Read Stories

TV9 Kannada

Leave a Reply

Your email address will not be published. Required fields are marked *