Karnataka News Today Live Updates: ರಾಜ್ಯ ವಿಧಾನಸಭೆ ಚುನಾವಣೆಗೆ ಎರಡು-ಮೂರು ತಿಂಗಳು ಬಾಕಿ ಉಳಿದಿದ್ದು ಮೂರು ರಾಜಕೀಯ ಪಕ್ಷಗಳ ಪ್ರಚಾರದ ತಾಳ ಮೇಳ ಜೋರಾಗಿಯೇ ನಡೆಯುತ್ತಿದ್ದು ಉಚಿತ ಭಾಗ್ಯಗಳ ಭರವಸೆ, ನಿವೃತ್ತಿ ಮಾತು ಜೋರಾಗಿಯೇ ಕೇಳಿಬುರತ್ತಿವೆ.

Image Credit source: Prajavani
ರಾಜ್ಯ ವಿಧಾನಸಭೆ ಚುನಾವಣೆಗೆ ಎರಡು-ಮೂರು ತಿಂಗಳು ಬಾಕಿ ಉಳಿದಿದ್ದು ರಾಜಕೀಯ ಪಕ್ಷಗಳ ಪ್ರಚಾರದ ತಾಳ ಮೇಳ ಜೋರಾಗಿಯೇ ನಡೆಯುತ್ತಿದೆ. ಕಾಂಗ್ರೆಸ್ ಪ್ರಚಾರದ ಭರಾಟೆಯಲ್ಲಿ ಅಧಿಕಾರಕ್ಕೆ ಬಂದ ಮೇಲೆ ಕೆಲವೊಂದಿಷ್ಟು ಉಚಿತ ಸೌಲಭ್ಯಗಳನ್ನು ನೀಡುವುದಾಗಿ ಉಚಿತವಾಗಿಯೇ ಘೋಷಿಸಿದ್ದಾರೆ. ಕಾಂಗ್ರೆಸ್ ಬಸ್ ಯಾತ್ರೆ ಮೂಲಕ ರಾಜ್ಯ ಸುತ್ತಿದ್ದರೇ, ಜೆಡಿಎಸ್ ಪಂಚರತ್ನ ಯಾತ್ರೆ ಮೂಲಕ ಸುತ್ತುತ್ತಿದೆ ಪಂಚ ಯೋಜನೆಗಳನ್ನು ಮುಂದಿಟ್ಟುಕೊಂಡು. ಇನ್ನು ಬಿಜೆಪಿಯ ವರಸೆ ಸ್ವಲ್ಪ ಬಿನ್ನವಾಗಿದ್ದು ಕಾರ್ಯಕರ್ತ ಸಂಖ್ಯೆ ಹೆಚ್ಚಿಸಿಕೊಳ್ಳುವುದು, ಮನೆಮನೆಗೂ ಸರ್ಕಾರದ ಕಾರ್ಯಕ್ರಮವನ್ನು ಮುಟ್ಟಿಸುವುದರ ದೃಷ್ಟಿಯಿಂದ ವಿಜಯ ಸಂಕಲ್ಪ ಅಭಿಯಾನ ಪ್ರಾರಂಭಿಸಿದೆ. ಚಿಕ್ಕಬಳ್ಳಾಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಬರಲಿದ್ದಾರೆ ಎಂದು ಸಚಿವ ಡಾ ಕೆ.ಸುಧಾಕರ ಹೇಳಿದ್ದಾರೆ. ನಿನ್ನೆ, ಮೊನ್ನೆ ರಾಜ್ಯದಲ್ಲಿ ಅತಿ ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದ ವಿಷಯ ಹಾಸನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯರ ನಿವೃತ್ತಿ ಭಾಷಣ. ಕೊಟ್ಟ ಮಾತಿನಿನಂತೆ ನಡೆದುಕೊಳ್ಳದಿದ್ದರೇ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಣೆ ಮಾಡಿದ್ದಾರೆ. ಹಾಗೇ ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಉಡುಪಿಯಲ್ಲಿ ನಾನು ನಿಮ್ಮವನೇ ಎಂದಿದ್ದಾರೆ. ಇನ್ನು ಬಿಜೆಪಿ ಸರ್ಕಾರಿ ಕಾರ್ಯಕ್ರಮಗಳ ಉದ್ಘಾಟನೆಗೆ ಮತ್ತೆ ಬಂದೆ ಎನ್ನುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಕ್ಕೆ ಕರೆಸಿಕೊಳ್ಳುತ್ತಿದ್ದು ಒಂದು ಮುಖ 150 ಗುರಿ ಎಂದು ಹೇಳುತ್ತಿದೆ. ಇದರೊಂದಿಗೆ ಇಂದಿನ ಅಪ್ಡೇಟ್ಸ್
ತಾಜಾ ಸುದ್ದಿ