Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 227 ಜನರಿಗೆ ಕೊರೊನಾ ದೃಢ; 2 ಮಂದಿ ಸಾವು | Karnataka New Corona Cases Death Toll Total Covid19 Active Coronavirus Cases on November 12


Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 227 ಜನರಿಗೆ ಕೊರೊನಾ ದೃಢ; 2 ಮಂದಿ ಸಾವು

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 12) ಹೊಸದಾಗಿ 227 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,91,369 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,45,164 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,140 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,036 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 147 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,53,669 ಕ್ಕೆ ಏರಿಕೆಯಾಗಿದೆ. 12,53,669 ಸೋಂಕಿತರ ಪೈಕಿ 12,30,715 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,307 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,646 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 147, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 1, ಚಿತ್ರದುರ್ಗ 3, ದಕ್ಷಿಣ ಕನ್ನಡ 14, ದಾವಣಗೆರೆ 0, ಧಾರವಾಡ 4, ಗದಗ 0, ಹಾಸನ 7, ಹಾವೇರಿ 0, ಕಲಬುರಗಿ 0, ಕೊಡಗು 5, ಕೋಲಾರ 2, ಕೊಪ್ಪಳ 0, ಮಂಡ್ಯ 2, ಮೈಸೂರು 10, ರಾಯಚೂರು 0, ರಾಮನಗರ 0, ಶಿವಮೊಗ್ಗ 2, ತುಮಕೂರು 6, ಉಡುಪಿ 6, ಉತ್ತರ ಕನ್ನಡ 9, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ. ಕೊರೊನಾದಿಂದ ಸಾವನ್ನಪ್ಪುವರ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಹೊಸತಾಗಿ ದಾಖಲಾಗುತ್ತಿರುವ ಕೊರೊನಾ ಪ್ರಕರಣಗಳು ಕೂಡ ಕಡಿಮೆ ಆಗಿದೆ.

ಇದನ್ನೂ ಓದಿ: ಕೊರೊನಾ ಇಳಿಕೆ ಬೆನ್ನಲ್ಲೇ 2ನೇ ಡೋಸ್ ಲಸಿಕೆಗೆ ಜನರು ಹಿಂದೇಟು, ಸಿಂಗಾಪುರ ಮಾಡೆಲ್ ಪ್ರಸ್ತಾಪ ಮಾಡಿದ ತಾಂತ್ರಿಕ ಸಲಹಾ ಸಮಿತಿ

ಇದನ್ನೂ ಓದಿ: ಬೆಂಗಳೂರು: ನ.29ರಿಂದ ಬಸವನಗುಡಿಯಲ್ಲಿ ಕಡಲೇಕಾಯಿ ಪರಿಷೆ ಆರಂಭ; ಕೊರೊನಾ ನಿಯಮ ಪಾಲಿಸಿ ಪರಿಷೆ ನಡೆಸಲು ಅನುಮತಿ

TV9 Kannada


Leave a Reply

Your email address will not be published. Required fields are marked *