Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 254 ಜನರಿಗೆ ಕೊರೊನಾ ದೃಢ; 3 ಮಂದಿ ಸಾವು | Karnataka New Corona Cases Death Toll Total Covid19 Active Coronavirus Cases on November 24

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 254 ಜನರಿಗೆ ಕೊರೊನಾ ದೃಢ; 3 ಮಂದಿ ಸಾವು

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 24) ಹೊಸದಾಗಿ 254 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,94,255 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,49,629 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,185 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,412 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 152 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,55,440 ಕ್ಕೆ ಏರಿಕೆಯಾಗಿದೆ. 12,55,440 ಸೋಂಕಿತರ ಪೈಕಿ 12,33,996 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,326 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,117 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 152, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 5, ಚಿತ್ರದುರ್ಗ 4, ದಕ್ಷಿಣ ಕನ್ನಡ 14, ದಾವಣಗೆರೆ 0, ಧಾರವಾಡ 5, ಗದಗ 0, ಹಾಸನ 15, ಹಾವೇರಿ 0, ಕಲಬುರಗಿ 1, ಕೊಡಗು 1, ಕೋಲಾರ 0, ಕೊಪ್ಪಳ 0, ಮಂಡ್ಯ 3, ಮೈಸೂರು 30, ರಾಯಚೂರು 0, ರಾಮನಗರ 0, ಶಿವಮೊಗ್ಗ 4, ತುಮಕೂರು 4, ಉಡುಪಿ 8, ಉತ್ತರ ಕನ್ನಡ 0, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ 1 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಧಾರವಾಡ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಇದನ್ನೂ ಓದಿ: ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಹೊಸ ಕೊರೊನಾ ಮಾರ್ಗಸೂಚಿ ಬಿಡುಗಡೆ; ಇಲ್ಲಿದೆ ವಿವರ

ಇದನ್ನೂ ಓದಿ: ಕೊವಿಡ್ ವಿರುದ್ಧ ಕೊವ್ಯಾಕ್ಸಿನ್ ಶೇ 50ರಷ್ಟು ಪರಿಣಾಮಕಾರಿ: ಲ್ಯಾನ್ಸೆಟ್ ವರದಿ

TV9 Kannada

Leave a comment

Your email address will not be published. Required fields are marked *