Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 322 ಜನರಿಗೆ ಕೊರೊನಾ ದೃಢ; 3 ಮಂದಿ ಸಾವು | Karnataka New Corona Cases Death Toll Total Covid19 Active Coronavirus Cases on November 27


Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 322 ಜನರಿಗೆ ಕೊರೊನಾ ದೃಢ; 3 ಮಂದಿ ಸಾವು

ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 27) ಹೊಸದಾಗಿ 322 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,95,285 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,50,306 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,196 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,754 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 149 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,55,984 ಕ್ಕೆ ಏರಿಕೆಯಾಗಿದೆ. 12,55,984 ಸೋಂಕಿತರ ಪೈಕಿ 12,34,377 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,327 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 5,279 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 149, ಬೀದರ್ 2, ಚಾಮರಾಜನಗರ 3, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 4, ಚಿತ್ರದುರ್ಗ 5, ದಕ್ಷಿಣ ಕನ್ನಡ 13, ದಾವಣಗೆರೆ 0, ಧಾರವಾಡ 76, ಗದಗ 2, ಹಾಸನ 7, ಹಾವೇರಿ 0, ಕಲಬುರಗಿ 0, ಕೊಡಗು 3, ಕೋಲಾರ 1, ಕೊಪ್ಪಳ 2, ಮಂಡ್ಯ 1, ಮೈಸೂರು 27, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 7, ಉಡುಪಿ 5, ಉತ್ತರ ಕನ್ನಡ 4, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ. ತುಮಕೂರು, ಧಾರವಾಡ ಹಾಗೂ ಚಿತ್ರದುರ್ಗ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಇದನ್ನೂ ಓದಿ: ಗಡಿಭಾಗದಲ್ಲಿ ಕಟ್ಟೆಚ್ಚರ, ಮಾಸ್ಕ್, ಲಸಿಕೆ ಕಡ್ಡಾಯ, ಬೂಸ್ಟರ್ ಡೋಸ್; ಸಭೆಯ ಮುಖ್ಯ ತೀರ್ಮಾನಗಳ ಬಗ್ಗೆ ಆರ್ ಅಶೋಕ್ ಮಾಹಿತಿ

ಇದನ್ನೂ ಓದಿ: ದೇಶಕ್ಕೀಗ ಒಮಿಕ್ರಾನ್​ ಆತಂಕ; ಕೊರೊನಾದ ಈ ಹೊಸ ತಳಿ ಹೆಚ್ಚಿನ ಆತಂಕ ಸೃಷ್ಟಿಸಲು ಕಾರಣವೇನು? ಇಲ್ಲಿದೆ ಮಾಹಿತಿ

TV9 Kannada


Leave a Reply

Your email address will not be published. Required fields are marked *