8ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವಾಗಿದ್ದು, ಇದೀಗ ಆಕೆ 6 ತಿಂಗಳ ಗರ್ಭಿಣಿ ಎಂದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಸಾಂದರ್ಭಿಕ ಚಿತ್ರ
ಕೊಪ್ಪಳ: ಎಂಟನೇ ತರಗತಿ ವಿದ್ಯಾರ್ಥಿನಿ (Student) ಗರ್ಭಿಣಿಯಾಗಿರುವ (Pregnant) ಆಘಾತಕಾರಿ ಘಟನೆ ಕೊಪ್ಪಳ(Koppal ) ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ(Rape) ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.