Karnataka Polls Beneficiaries’ Conference in Vijayapura BJP MLA Basanagouda Patil Yatnal Controversial Statement At Vijayapura news | ಮೋದಿ ಮುಖ ನೋಡಿ ಮತ ಹಾಕಿ, ಇಲ್ಲದಿದ್ದರೆ ಭಿಕ್ಷೆ ಬೇಡಬೇಕಾಗುತ್ತದೆ: ಯತ್ನಾಳ್


ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲು ಟೊಂಕ ಕಟ್ಟಿ ನಿಂತಿರುವ ಬಿಜೆಪಿ ಮತದಾರರನ್ನು ತನ್ನತ್ತ ಸೆಳೆಯಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಇದೀಗ ಬಿಜೆಪಿ ಶಾಸಕ ಯತ್ನಾಳ್ ಅವರು, ಮೋದಿ ಮುಖ ನೋಡಿ ಮತ ಹಾಕಿ ಇಲ್ಲದಿದ್ದರೆ ಭಿಕ್ಷೆ ಬೇಡಬೇಕಾಗುತ್ತದೆ ಎಂದಿದ್ದಾರೆ.

ವಿಜಯಪುರ: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲು ಟೊಂಕ ಕಟ್ಟಿ ನಿಂತಿರುವ ಬಿಜೆಪಿ, ಮತದಾರರನ್ನು ತನ್ನತ್ತ ಸೆಳೆಯಲು ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ. ಇದೀಗ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರು, ಮೋದಿ ಮುಖ ನೋಡಿ ಮತ ಹಾಕಿ ಇಲ್ಲದಿದ್ದರೆ ಭಿಕ್ಷೆ ಬೇಡಬೇಕಾಗುತ್ತದೆ ಎಂದಿದ್ದಾರೆ. ವಿಜಯಪುರದಲ್ಲಿ ನಡೆದ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಚುನಾವಣೆ ದಿನ ಮೋದಿ ಮುಖ ನೋಡುವುದು, ಮತದಾನ ಮಾಡುವುದು ಅಷ್ಟೆ. ಮೋದಿಗೆ ಮತ ಹಾಕಿದರೆ ಸುರಕ್ಷಿತವಾಗಿ ಇರುತ್ತೀರಿ. ಇಲ್ಲದಿದ್ದರೆ ಪಾಕಿಸ್ತಾನ ದೇಶದಂತೆ ಎಲ್ಲರೂ ದಿವಾಳಿಯಾಗಬೇಕಾಗುತ್ತದೆ, ಭಿಕ್ಷೆ ಬೇಡಬೇಕಾಗುತ್ತೆ ಎಂದು ಕೈಸನ್ನೆ ಮೂಲಕ ತೋರಿಸಿದರು. ನರೇಂದ್ರ ಮೋದಿ (Narendra Modi)ಯವರನ್ನು ಪ್ರಧಾನಿಯನ್ನಾಗಿ ಪಡೆದಿರುವುದು ನಮ್ಮ ಸುದೈವ ಅಂತಾನೂ ಹೇಳಿದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

TV9 Kannada


Leave a Reply

Your email address will not be published. Required fields are marked *