Karnataka Rain: ಇಂದಿನಿಂದ 3 ದಿನ ಮಲೆನಾಡು, ಕರಾವಳಿ, ಬೆಂಗಳೂರಿನಲ್ಲಿ ವ್ಯಾಪಕ ಮಳೆ; ಹಳದಿ ಅಲರ್ಟ್​ ಘೋಷಣೆ | Karnataka Rain: Heavy Rainfall Lashes 3 More Days in Malnad and Bengaluru Weather Today Monsoon 2022


Bengaluru Rain: ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 9ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

Bangalore Rains: ಕರ್ನಾಟಕದ ಬೆಂಗಳೂರು, ಮಲೆನಾಡು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಜೂನ್ 9ರವರೆಗೂ ಮಳೆ ಸುರಿಯುವ ಸಾಧ್ಯತೆಯಿದೆ. ರಾಜ್ಯಕ್ಕೆ ಈಗಾಗಲೇ ಮುಂಗಾರು (Monsoon) ಪ್ರವೇಶವಾಗಿದ್ದು, ಇಂದಿನಿಂದ 3 ದಿನ ಮಳೆ ಹೆಚ್ಚಾಗಲಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ (ಜೂನ್ 7) ಜೂನ್ 9ರವರೆಗೆ ಹಳದಿ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ.

ಜೂನ್ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿಯಲ್ಲಿ ಇಂದಿನಿಂದ ಮಳೆ ಬಿರುಸು ಪಡೆಯುವ ನಿರೀಕ್ಷೆಯಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದಿನಿಂದ ಮೂರು ದಿನ ಗುಡುಗು ಸಹಿತ ಮಳೆ ಹೆಚ್ಚಾಗಲಿದೆ.

ಇಂದಿನಿಂದ ಜೂನ್‌ 9ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ (Bengaluru Rain), ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕರ್ನಾಟಕದ ಹಲವು ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

TV9 Kannada


Leave a Reply

Your email address will not be published.