Karnataka Rain: ಕರಾವಳಿಯಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ; ಮಲೆನಾಡಿನಲ್ಲಿ 4 ದಿನ ವರುಣನ ಆರ್ಭಟ | Karnataka Rain Heavy Rainfall in Coastal Karnataka till June 20 Weather Forecast Bangalore Rains Monsoon


Karnataka Rain: ಕರಾವಳಿಯಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ; ಮಲೆನಾಡಿನಲ್ಲಿ 4 ದಿನ ವರುಣನ ಆರ್ಭಟ

ಮಳೆ

Image Credit source: NDTV

Bengaluru Rain: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ. ಕರಾವಳಿಯಲ್ಲಿ ಹಳದಿ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ನಿನ್ನೆ ಮಳೆ ಕೊಂಚ ಕಡಿಮೆಯಾಗಿತ್ತು. ಆದರೆ, ಇಂದಿನಿಂದ ಮತ್ತೆ ನೈಋತ್ಯ ಮುಂಗಾರು ಮಳೆ (Monsoon) ಆರಂಭವಾಗಲಿದ್ದು, ಮುಂದಿನ 4 ದಿನ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ (Heavy Rainfall) ಸುರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್ 20ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಹಳದಿ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ವ್ಯಾಪಕ ಮಳೆಯಾಗಲಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದ್ದು, ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಇಂದಿನಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಚಾಮರಾಜನಗರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಜೂ.19ರವರೆಗೆ ಹಳದಿ ಅಲರ್ಟ್‌ ನೀಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಜೂ. 20ರವರೆಗೆ ಹಳದಿ ಅಲರ್ಟ್‌ ನೀಡಲಾಗಿದೆ. ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿ 15 ದಿನಗಳೇ ಕಳೆದರೂ ಮಳೆ ಬಿರುಸು ಪಡೆಯದ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆ ಉಂಟಾಗಿದೆ.

TV9 Kannada


Leave a Reply

Your email address will not be published.