Karnataka Rain: ಕರಾವಳಿಯಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ; ಮಲೆನಾಡಿನಲ್ಲಿ ನಾಳೆಯಿಂದ ಭಾರೀ ಮಳೆ | Karnataka Rain Heavy Rainfall in Coastal Districts Yellow Alert issued Weather Today june 14 Monsoon 2022


Karnataka Rain: ಕರಾವಳಿಯಲ್ಲಿ ಇಂದು ಹಳದಿ ಅಲರ್ಟ್​ ಘೋಷಣೆ; ಮಲೆನಾಡಿನಲ್ಲಿ ನಾಳೆಯಿಂದ ಭಾರೀ ಮಳೆ

ಕರ್ನಾಟಕದಲ್ಲಿ ಮಳೆ

Image Credit source: Live Mint

Monsoon 2022: ನಾಳೆಯಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ತೀವ್ರತೆ ಪಡೆದುಕೊಳ್ಳಲಿದೆ. ಇಂದು ಕಾಸರಗೋಡು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ‌ ಮಳೆಯ ಮುನ್ಸೂಚನೆ ಇದೆ.

Weather Today: ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗುತ್ತಿದ್ದು, ಇಂದಿನಿಂದ 3 ದಿನ ವರುಣನ ಆರ್ಭಟ (Heavy Rainfall) ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ, ಕರಾವಳಿಯಲ್ಲಿ ಹಳದಿ ಅಲರ್ಟ್​ (Yellow Alert) ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಜೂನ್ 15ರಿಂದ ಮಳೆ ಹೆಚ್ಚಾಗಲಿದೆ. ಜೂನ್ 16ರಿಂದ ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ನಾಳೆಯಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆ ತೀವ್ರತೆ ಪಡೆದುಕೊಳ್ಳಲಿದೆ. ಇಂದು ಕಾಸರಗೋಡು, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ‌ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಪಾವಗಢ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರದ‌ಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಇಂದು ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಯಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕುಗಳಲ್ಲಿ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮಲೆನಾಡು, ಅರೆ ಬಯಲು ಸೀಮೆ ಪ್ರದೇಶದಲ್ಲಿ ಮುಂಗಾರು ನಿಧಾನವಾಗಿ ಪ್ರವೇಶಿಸುತ್ತಿದೆ. ಇಂದಿನಿಂದ ಮುಂಗಾರಿನ ಆರ್ಭಟ ಹೆಚ್ಚಾಗಲಿದೆ.

TV9 Kannada


Leave a Reply

Your email address will not be published.