Karnataka Rain: ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ 5 ದಿನ ಜೋರು ಮಳೆ; ಉತ್ತರ ಒಳನಾಡಿನಲ್ಲಿ ಹಳದಿ ಅಲರ್ಟ್​ | Karnataka Rain: Orange Alert issed in Coastal and Malnad Districts till August 2 Bangalore Rains Weather Today


Monsoon 2022: ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹಾಗೂ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದಿನಿಂದ ಆಗಸ್ಟ್​ 2ರವರೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Karnataka Rain: ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ 5 ದಿನ ಜೋರು ಮಳೆ; ಉತ್ತರ ಒಳನಾಡಿನಲ್ಲಿ ಹಳದಿ ಅಲರ್ಟ್​

ಮಳೆ

Image Credit source: Live Mint

Bengaluru Rain: ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಳೆಯ (Rain in Karnataka) ಆರ್ಭಟ ಹೆಚ್ಚಾಗಿದೆ. ಇಂದಿನಿಂದ 5 ದಿನಗಳ ಕಾಲ ರಾಜ್ಯದ ಬೆಂಗಳೂರು, ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹಾಗೂ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದಿನಿಂದ ಆಗಸ್ಟ್​ 2ರವರೆಗೆ ಆರೆಂಜ್ ಅಲರ್ಟ್​ (Orange Alert) ಘೋಷಿಸಲಾಗಿದೆ. ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ.

ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಅತಿ ವ್ಯಾಪಕ ಮಳೆ ಸುರಿಯಲಿದೆ. ಕರ್ನಾಟಕದಲ್ಲಿ ಕಳೆದೊಂದು ವಾರದಿಂದ ಕ್ಷೀಣಿಸಿದ್ದ ಮಳೆಯ ಅಬ್ಬರ ಇಂದು ಮತ್ತೆ ಹೆಚ್ಚಾಗಿದೆ. ಇಂದಿನಿಂದ ಇದೀಗ ಮತ್ತೆ ಮುಂದಿನ ಐದು ದಿನ (ಆಗಸ್ಟ್ 2ರವರೆಗೆ) ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಅತಿಯಾದ ಮಳೆ ಸುರಿಯಲಿದ್ದು, ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಈ ಭಾಗದಲ್ಲಿ ಇಂದು 11.5 ಸೆಂ.ಮೀ.ನಿಂದ 20 ಸೆಂ.ಮೀ.ನಷ್ಟು ಮಳೆ ಆಗಬಹುದು ಎಂದು ಅಂದಾಜಿಸಲಾಗಿದೆ.

TV9 Kannada


Leave a Reply

Your email address will not be published. Required fields are marked *