Karnataka Weather Today: ಮಲೆನಾಡು ಮತ್ತು ಕರಾವಳಿಯ 7 ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲೂ ಮಳೆ ಹೆಚ್ಚಾಗುತ್ತಿದೆ.

Image Credit source: Hindustan Times
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆ (Rainfall) ಹೆಚ್ಚಾಗಿದೆ. ಇಂದಿನಿಂದ ಆಗಸ್ಟ್ 2ರವರೆಗೆ ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದೆ. ಹಾಗೇ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ. ಹೀಗಾಗಿ, ಮಲೆನಾಡು ಮತ್ತು ಕರಾವಳಿಯ 7 ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ.
ಉತ್ತರ ಒಳನಾಡಿನಲ್ಲೂ ಮಳೆ ಹೆಚ್ಚಾಗುತ್ತಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಇಂದು ‘ಹಳದಿ ಅಲರ್ಟ್’ ಘೋಷಿಸಲಾಗಿದೆ. ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.