Karnataka Rain: ಕರ್ನಾಟಕದಲ್ಲಿ ಮತ್ತೆ ಮುಂಗಾರು ಅಬ್ಬರ; ಇನ್ನೂ 3 ದಿನ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಮಳೆ; | Karnataka Rain: Monsoon Enters Karnataka Rainfall Weather Today Bangalore Rains on June 12


Karnataka Rain: ಕರ್ನಾಟಕದಲ್ಲಿ ಮತ್ತೆ ಮುಂಗಾರು ಅಬ್ಬರ; ಇನ್ನೂ 3 ದಿನ ರಾಜ್ಯಾದ್ಯಂತ ಗುಡುಗು, ಮಿಂಚು ಸಹಿತ ಮಳೆ;

ಮಳೆ

Image Credit source: Hindustan Times

Monsoon 2022: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಗುಡುಗು ಸಹಿತ ಮಳೆಯಾಗಲಿದೆ. ಇಂದು ದಕ್ಷಿಣ ಮಹಾರಾಷ್ಟ್ರ, ಉತ್ತರ ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಮುಂಗಾರು ಪ್ರವೇಶಿಸಲಿದೆ.

Bangalore Rains: ಕರ್ನಾಟಕದಲ್ಲಿ ಕಳೆದ 10 ದಿನಗಳಿಂದ ಮುಂಗಾರು (Monsoon) ದುರ್ಬಲವಾಗಿತ್ತು. ಇದೀಗ ಮಳೆಯ ಅಬ್ಬರ ಹೆಚ್ಚಾಗುತ್ತಿರುವುದರಿಂದ ಕೃಷಿ ಚಟುವಟಿಕೆಯೂ ಚುರುಕುಗೊಂಡಿದೆ. ಬೆಂಗಳೂರಿನಲ್ಲಿ ಮಳೆ ಕಡಿಮೆಯಾಗಿ, ಮೋಡ ಮುಸುಕಿದ ವಾತಾವರಣವಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಜೂನ್ 14ರವರೆಗೆ ಮಳೆ (Heavy Rainfall) ಹೆಚ್ಚಾಗಲಿದೆ. ಇಂದು ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ.

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಇಂದಿನಿಂದ ಜೂನ್ 14ರವರೆಗೆ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಹಾಗೂ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಾರವಾರ, ತೀರ್ಥಹಳ್ಳಿ, ಸಾಗರ, ಕೊಪ್ಪ, ಭಟ್ಕಳ, ಅಂಕೋಲಾ, ಹೊನ್ನಾವರ, ಕುಮಟಾ, ಶಿರಸಿ ಮುಂತಾದ ಭಾಗಗಳಲ್ಲಿ ಮಳೆ ಚುರುಕಾಗಿದೆ.

TV9 Kannada


Leave a Reply

Your email address will not be published.