Karnataka Rain: ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; ಮಲೆನಾಡು, ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ – Karnataka Rain Heavy Rainfall Expected till November 17 Bangalore Rains Bengaluru Weather Today


Bengaluru Weather Today: ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡು, ಮಲೆನಾಡು (Malnad), ಕರಾವಳಿ ಭಾಗಗಳಲ್ಲಿ (Coastal Karnataka) ನ. 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್ 17 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಯಲಿದೆ.

ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಮಳೆ ಮುಂದುವರೆಯಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

TV9 Kannada


Leave a Reply

Your email address will not be published.