Karnataka Weather Today: ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಇಂದು ಕೊಡಗಿನಲ್ಲಿ ಮಳೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.
Monsoon 2022: ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ (Bengaluru Rain) ಇಂದು ಮಳೆಯ ಹಿನ್ನೆಲೆಯಲ್ಲಿ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಇಂದು ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಇಂದು ಕೊಡಗಿನಲ್ಲಿ (Kodagu Rain) ಮಳೆಯಿಂದ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ.
ಕಳೆದೊಂದು ವಾರದಲ್ಲಿ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಶೇ.500ರಷ್ಟು ಅಧಿಕ ಮಳೆಯಾಗಿ ದಾಖಲೆ ನಿರ್ಮಿಸಿದೆ. ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದ್ದು, ಕರಾವಳಿ ಮತ್ತು ಮಲೆನಾಡು ಹೊರತುಪಡಿಸಿದರೆ ಉಳಿದೆಡೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಿದ್ದು, ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿದಿದೆ. ಕರ್ನಾಟಕದಲ್ಲಿ ಇಂದಿನಿಂದ 2 ದಿನ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ.