
Image Credit source: Manorama
Karnataka Weather Today: ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಅಬ್ಬರ ಕಡಿಮೆಯಾಗಿದೆ. ಆದರೂ ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ಇನ್ನು ಎರಡು ದಿನಗಳಲ್ಲಿ ಕೇರಳಕ್ಕೆ (Kerala Rain) ನೈಋತ್ಯ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದೆ. ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲೂ ಮಾನ್ಸೂನ್ (Monsoon 2022) ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ವರುಣನ ಆರ್ಭಟ ಕಡಿಮೆಯಾಗಿದ್ದರೂ ಮಳೆ ಸಂಪೂರ್ಣವಾಗಿ ನಿಂತಿಲ್ಲ. ಕಳೆದ ವಾರಾಂತ್ಯದವರೆಗೆ ಬೆಂಗಳೂರು, ಮಲೆನಾಡು, ಕರಾವಳಿಯಲ್ಲಿ ಮಳೆ ಅಬ್ಬರಿಸಿತ್ತು. ಕರ್ನಾಟಕದಲ್ಲಿ (Karnataka Rains) ಮೂರ್ನಾಲ್ಕು ದಿನಗಳಿಂದ ಮಳೆ ಅಬ್ಬರ ಕಡಿಮೆಯಾಗಿದೆ. ಆದರೂ ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇಂದು ಕೇರಳ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೇರಳ ಮತ್ತು ಲಕ್ಷದ್ವೀಪದಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಸಿಕ್ಕಿಂ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸಾಕಷ್ಟು ವ್ಯಾಪಕವಾದ ಗುಡುಗು ಸಹಿತ ಮಳೆಯಾಗಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕರ್ನಾಟಕದ ಕರಾವಳಿಯಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.