
Image Credit source: Hindustan Times
Karnataka Weather Today: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆಯಾಗಲಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಇನ್ನೂ 3 ದಿನಗಳ ಕಾಲ ರಾಜ್ಯಾದ್ಯಂತ ವರುಣನ ಆರ್ಭಟವಿರಲಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಇನ್ನೂ ಮೇ 24ರವರೆಗೆ ಬೆಂಗಳೂರಿನಲ್ಲಿ ಮಳೆಯಾಗುವ (Bengaluru Rains) ಸಾಧ್ಯತೆಯಿದೆ. ಮೇ 27ರ ವೇಳೆಗೆ ಕೇರಳಕ್ಕೆ ಮುಂಗಾರು (Kerala Monsoon) ಪ್ರವೇಶವಾಗಲಿದೆ. ಜೂನ್ ಮೊದಲ ವಾರಕ್ಕೆ ಕರ್ನಾಟಕದಲ್ಲೂ ಮಾನ್ಸೂನ್ ಶುರುವಾಗಲಿದೆ. ಅದಕ್ಕೂ ಮೊದಲೇ ಕೇರಳದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಹಳದಿ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ.
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದರೂ ಇಂದಿನಿಂದ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದೆ.
ರಾಜ್ಯವ್ಯಾಪಿ ಭರ್ಜರಿ ಮಳೆ ಮುಂದುವರಿದಿದ್ದು ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮೇ 24ರವರೆಗೂ ಮುಂಗಾರು ಪೂರ್ವ ಮಳೆ ಅಬ್ಬರಿಸಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳು, ಕರಾವಳಿಯ ದಕ್ಷಿಣ ಕನ್ನಡ, ಉತ್ತರ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ ಜಿಲ್ಲೆಗಳಲ್ಲಿ 25 ಡಿಗ್ರಿಗಿಂತ ಕಡಿಮೆ ತಾಪಮಾನ ವರದಿಯಾಗಿದೆ. ಶಿವಮೊಗ್ಗ, ಮಂಡ್ಯ, ಬೆಳಗಾವಿ, ಬೆಂಗಳೂರು, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ವಾಡಿಕೆಗಿಂತ 10 ಡಿಗ್ರಿಗಿಂತ ಕಡಿಮೆ ತಾಪಮಾನ ದಾಖಲಾಗಿದೆ.