Karnataka Rain: ಕರ್ನಾಟಕದ 20 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ – Karnataka Rain Heavy Rainfall in Bangalore Weather Today Bengaluru Rains Weather Forecast Kannada News Nov 16


Weather Today: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಗುರ ಮಳೆಯಾಗುತ್ತಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ತುಂತುರು ಮಳೆ ಮುಂದುವರೆದಿದ್ದು, ಇದರ ಜೊತೆ ಚಳಿಯೂ ಹೆಚ್ಚಾಗಿದೆ. ಕರ್ನಾಟಕದ ಉತ್ತರ ಒಳನಾಡು, ಮಲೆನಾಡು (Malnad), ಕರಾವಳಿಯ (Coastal Karnataka) ಸುಮಾರು 20 ಜಿಲ್ಲೆಗಳಲ್ಲಿ ನ. 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹಗುರ ಮಳೆಯಾಗುತ್ತಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಯಲಿದೆ.

ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಮಳೆ ಮುಂದುವರೆಯಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

TV9 Kannada


Leave a Reply

Your email address will not be published.