Bangalore Rains: ದಕ್ಷಿಣ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಚಾಮರಾಜನಗರ, ಮೈಸೂರು, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿಯಲ್ಲಿ ಆ. 4ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.
Monsoon 2022: ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರ್ನಾಟಕದ 7 ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಇಂದು ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಭಾರತದ ಹವಾಮಾನ ಇಲಾಖೆ (IMD) ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಆಗಸ್ಟ್ 6ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಹೆಚ್ಚಾಗಲಿದೆ.
ಇಂದಿನಿಂದ 4 ದಿನಗಳ ಕಾಲ ಅಂದರೆ ಆಗಸ್ಟ್ 6ರವರೆಗೆ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದಿನಿಂದ (ಆ. 3) ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭಟ್ಕಳದ ಮುತ್ತಳ್ಳಿ ಗ್ರಾಮದಲ್ಲಿ ಮಳೆಯ ಅವಘಡದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ಮಳೆಯಿಂದ ಮನೆಯ ಗೋಡೆ ಕುಸಿದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.