Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮಳೆ | Karnataka Rain Heavy Rainfall Lashes till on July 31 in Coastal Karnataka and Malnad Weather Today Monsoon


Mangaluru Rain: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್‌ ಜಿಲ್ಲೆಯಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ.

ಬೆಂಗಳೂರು: ಕಳೆದೊಂದು ವಾರದಿಂದ ಕೊಂಚ ಶಾಂತವಾಗಿದ್ದ ಮಲೆನಾಡು ಮತ್ತು ಕರಾವಳಿಯಲ್ಲಿ ಮತ್ತೆ ಮಳೆಯ (Rainfall) ಅಬ್ಬರ ಹೆಚ್ಚಾಗಿದೆ. 2 ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಆರೆಂಜ್ ಅಲರ್ಟ್​ (Orange Alert) ಮುಂದುವರೆದಿದೆ. ಇಂದು ಕೂಡ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್‌ ಜಿಲ್ಲೆಯಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ಮಲೆನಾಡು, ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕರ್ನಾಟಕದಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ. ಇಂದು ಬೆಳಗ್ಗೆ 8.30ರವರೆಗೆ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಕರಾವಳಿಯಲ್ಲಿ ಮಳೆ ಹೆಚ್ಚಾಗಿರುವುದರಿಂದ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಳೆಯಿಂದ ಪಾಂಡೇಶ್ವರ- ಶಿವನಗರ, ಬಿಜೈ, ಸುಭಾಷ್‌ನಗರ ಸೇರಿದಂತೆ ಅನೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು. ಮುಂಜಾಗ್ರತಾ ಕ್ರಮವಾಗಿ ಮಂಗಳೂರು ನಗರ, ಉಳ್ಳಾಲ, ಮುಲ್ಕಿ ಮತ್ತು ಮೂಡುಬಿದಿರೆ ವ್ಯಾಪ್ತಿಯ ಮಂಗಳೂರು ಕಂದಾಯ ಉಪ ವಿಭಾಗದ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ರಜೆ ಘೋಷಿಸಿದ್ದರು.

TV9 Kannada


Leave a Reply

Your email address will not be published. Required fields are marked *