Karnataka Rain: ಬೆಂಗಳೂರು, ಮಲೆನಾಡಿನಲ್ಲಿ ಇಂದು ಕೂಡ ಮಳೆ ಸಾಧ್ಯತೆ; ಉತ್ತರ ಕರ್ನಾಟಕದಲ್ಲಿ ತಗ್ಗಿದ ವರುಣನ ಅಬ್ಬರ | Karnataka Rain Moderate Rainfall Lashes in Bengaluru and Malnad Bangalore Rains Weather Today October 5


Bangalore Rains: ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಗುಡುಗುಸಹಿತ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ.

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಶುರುವಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ಕರ್ನಾಟಕದಲ್ಲಿ ಮಳೆ (Karnataka Rain) ಮುಂದುವರೆಯಲಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಕೊಂಚ ಕಡಿಮೆಯಾಗಿದ್ದರೂ ಬೆಂಗಳೂರು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಗರಿಷ್ಠ ತಾಪಮಾನದಲ್ಲಿ ಇಳಿಕೆಯಾಗಿದ್ದು, ಚಳಿಯ ವಾತಾವರಣ ಹೆಚ್ಚಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಇಂದು ಕೂಡ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಇಂದು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಗುಡುಗುಸಹಿತ ಮಳೆಯಾಗುವ ನಿರೀಕ್ಷೆ ಇರುವುದರಿಂದ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಹಾಗೇ, ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇಂದು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ನೀಡಲಾಗಿದೆ.

TV9 Kannada


Leave a Reply

Your email address will not be published.