Karnataka Rain: ಬೆಂಗಳೂರು, ಶಿವಮೊಗ್ಗ, ಕೊಡಗು ಸೇರಿ 8 ಜಿಲ್ಲೆಗಳಲ್ಲಿ ಇನ್ನು 3 ದಿನ ಭಾರೀ ಮಳೆ; ಹಳದಿ ಅಲರ್ಟ್ ಘೋಷಣೆ | Karnataka Rain: Heavy rains likely in Bengaluru, Mysuru, Shimoga, Kodagu yellow warning in 8 districts


Bangalore Rains: ಕರ್ನಾಟಕದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರು (Bengaluru Rains) ಸೇರಿದಂತೆ 8 ಜಿಲ್ಲೆಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಅ. 8ರವರೆಗೆ ಭಾರೀ ಮಳೆಯಾಗಲಿದೆ. ಆದರೆ, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಲಿದೆ. ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರದಲ್ಲೂ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ.

ಇಂದು ಯಾವ ರಾಜ್ಯಗಳಲ್ಲಿ ಮಳೆ?:
ಇಂದಿನಿಂದ ಅಕ್ಟೋಬರ್ 8ರವರೆಗೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅತಿ ಮಳೆ ಬೀಳುವ ಪ್ರದೇಶಗಳಲ್ಲಿರುವ ಜನರು ಎಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ. ಮುಂದಿನ ಮೂರು ದಿನ ಒಡಿಶಾ, ಆಂಧ್ರಪ್ರದೇಶದ ಕರಾವಳಿಯಲ್ಲಿ ವರುಣ ಅಬ್ಬರಿಸಲಿದ್ದಾನೆ. ಇದರ ಜೊತೆ ಛತ್ತೀಸ್​​ಗಢ ಮತ್ತು ಮಧ್ಯ ಪ್ರದೇಶದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

TV9 Kannada


Leave a Reply

Your email address will not be published.