Bengaluru Rains: ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
Bangalore Rains: ಬೆಂಗಳೂರಿನಲ್ಲಿ ವ್ಯಾಪಕ ಮಳೆ ಮುಂದುವರೆದಿದ್ದು, ಈಗಾಗಲೇ ಇಬ್ಬರು ಸಾವನ್ನಪ್ಪಿದ್ದಾರೆ. ಭಾರೀ ಮಳೆಗೆ 3 ಸಾವಿರಕ್ಕೂ ಹೆಚ್ಚು ಮನೆಗಳೊಳಗೆ ನೀರು ನುಗ್ಗಿದೆ. ಕರ್ನಾಟಕದಲ್ಲಿ ಭಾರೀ ಮಳೆಗೆ (Karnataka Rains) ಇಲ್ಲಿಯವರೆಗೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಇಂದು ಭಾರತೀಯ ಹವಾಮಾನ ಇಲಾಖೆಯು (IMD) ಕರ್ನಾಟಕದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ (Red Alert) ಘೋಷಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಯಾವುದೇ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿಗೆ ಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ.
ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿನ್ನೆ ಶಾಲೆಗಳಿಗೆ ರಜೆ ಘೋಷಿಸಿತ್ತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ (ಮೇ 20) ಮಳೆಯ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ.