Karnataka Rain: ಭಾರೀ ಮಳೆಯಿಂದ ಮಲೆನಾಡು, ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ; ಕೊಡಗಿನಲ್ಲಿ ಇಂದು ಶಾಲಾ- ಕಾಲೇಜುಗಳಿಗೆ ರಜೆ | Karnataka Rain: Red Alert Issued in Kodagu on August 6 Karnataka Weather Today Monsoon 2022 Bangalore Rains


Karnataka Weather Today: ಮುಂದಿನ 4 ದಿನಗಳವರೆಗೂ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇಂದು ಮಳೆಯ ಹಿನ್ನೆಲೆಯಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ.

Monsoon 2022: ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಾದ ತಮಿಳುನಾಡು (Tamil Nadu Rain), ಕೇರಳ (Kerala Rains), ಮಹಾರಾಷ್ಟ್ರದಲ್ಲೂ (Maharashtra Rain) ಮಳೆಯ ಆರ್ಭಟ ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ (Bengaluru Rain) ಇಂದು ಮಳೆಯ ಹಿನ್ನೆಲೆಯಲ್ಲಿ ಹಳದಿ ಅಲರ್ಟ್​ (Yellow Alert) ಘೋಷಿಸಲಾಗಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಆರೆಂಜ್ ಅಲರ್ಟ್​ (Orange Alert) ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇಂದು ಕೊಡಗಿನಾದ್ಯಂತ (Kodagu Rain) ಮಳೆಯಿಂದ ರೆಡ್ ಅಲರ್ಟ್​ (Red Alert)  ಘೋಷಿಸಲಾಗಿದ್ದು,  ಶಾಲಾ‌- ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಭಾರೀ ಮಳೆಯಿಂದ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಕಳೆದೊಂದು ವಾರದಲ್ಲಿ ರಾಜ್ಯದ ಒಳನಾಡಿನಲ್ಲಿ ಶೇ.500ರಷ್ಟು ಅಧಿಕ ಮಳೆಯಾಗಿ ದಾಖಲೆ ನಿರ್ಮಿಸಿದೆ. ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದ್ದು, ಕರಾವಳಿ ಮತ್ತು ಮಲೆನಾಡು ಹೊರತುಪಡಿಸಿದರೆ ಉಳಿದೆಡೆ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಮಳೆಯಾಗಿದ್ದು, ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿದಿದೆ. ಹೊಲ-ಗದ್ದೆಗಳು ಜಲಾವೃತಗೊಂಡು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕಾವೇರಿ ಕೊಳ್ಳದಲ್ಲಿ ಅಕ ಮಳೆಯಿಂದ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲೂ ಭಾರೀ ಮಳೆಯಾಗಿದೆ. ಇದರ ಪರಿಣಾಮವಾಗಿ, ಕರ್ನಾಟಕದಲ್ಲಿ ಇಂದಿನಿಂದ ಸೋಮವಾರದವರೆಗೆ ಗುಡುಗು ಮತ್ತು ಮಿಂಚುಗಳೊಂದಿಗೆ ತಕ್ಕಮಟ್ಟಿಗೆ ವ್ಯಾಪಕ ಮಳೆಯಾಗಲಿದೆ.

TV9 Kannada


Leave a Reply

Your email address will not be published. Required fields are marked *