Karnataka Rain: ಸುರಿಯುತ್ತಿರುವ ಭಾರೀ ಮಳೆ; ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Karnataka Rain Heavy rain Holiday announcement for Dakshina Kannada and Uttara Kannada schools colleges


ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ದಕ್ಷಿಣ ಕನ್ನಡದ ಸುಳ್ಯ ಮತ್ತು ಕಡಬ ಹಾಗೂ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಂಗನವಾಡಿ ಕೇಂದ್ರ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Karnataka Rain: ಸುರಿಯುತ್ತಿರುವ ಭಾರೀ ಮಳೆ; ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಾಂಕೇತಿಕ ಚಿತ್ರ

ಬೆಂಗಳೂರು: ರಾಜ್ಯಾದ್ಯಂತ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು, ಹಲವೆಡೆ ನಿರಂತರ ಮಳೆಯಾಗುತ್ತಿದೆ. ಕರವಾಳಿ ಭಾಗವಾಗಿರುವ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿರುವ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಸುಳ್ಯ, ಕಡಬ ತಾಲೂಕಿನಲ್ಲಿ ವರುಣಾರ್ಭಟ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೊರಡಿಸಿದ್ದು, ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಟ್ಕಳದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ತಾಲೂಕಿನ ಶಾಲಾ ಕಾಲೇಜಿಗೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ರಜೆ ಘೋಷಣೆ ಮಾಡಲಾಗಿದೆ.

ಇಂದಿನಿಂದ 4 ದಿನಗಳ ಕಾಲ ಅಂದರೆ ಆಗಸ್ಟ್ 4ರವರೆಗೆ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಅಲ್ಲದೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ಆಗಸ್ಟ್ 3ಕ್ಕೆ ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಮಳೆ ಹೆಚ್ಚಾಗಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3 ಮತ್ತು 4ರಂದು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಆಗಸ್ಟ್ 4ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆಗಸ್ಟ್ 3, 4ರಂದು ಮಳೆಯಾಗಲಿದೆ. ಮಂಡ್ಯ ಮತ್ತು ರಾಮನಗರದಲ್ಲಿ ಆಗಸ್ಟ್ 4ರಂದು ಭಾರೀ ಮಳೆ ಬೀಳುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಬಳ್ಳಾರಿ, ಮಂಡ್ಯ, ರಾಮನಗರದಲ್ಲಿ ಇಂದಿನಿಂದ ಆಗಸ್ಟ್ 4ರವರೆಗೆ ಹಾಗೂ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಬಾಗಲಕೋಟೆ, ವಿಜಯಪುರ ಮತ್ತು ಕಲಬುರಗಿಯಲ್ಲಿ ಆಗಸ್ಟ್ 4ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *