Karnataka Ratna: ಪುನೀತ್​ ರಾಜ್​ಕುಮಾರ್​ಗೆ ‘ಕರ್ನಾಟಕ ರತ್ನ’: ಅಪ್ಪು ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು? – Karnataka Ratna Award for Puneeth Rajkumar: Opposition leader Siddaramaiah reactionPuneeth Rajkumar | Siddaramaiah: ಕರ್ನಾಟಕ ಸರ್ಕಾರಕ್ಕೆ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ಪುನೀತ್​ ರಾಜ್​ಕುಮಾರ್​ ವ್ಯಕ್ತಿತ್ವ ಮತ್ತು ಸಾಧನೆಗಳ ಬಗ್ಗೆ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

TV9kannada Web Team


| Edited By: Madan Kumar

Nov 01, 2022 | 2:56 PM
‘ಪವರ್​ ಸ್ಟಾರ್​’ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರಿಗೆ ಇಂದು (ನ.1) ಮರಣೋತ್ತರವಾಗಿ ‘ಕರ್ನಾಟಕ ರತ್ನ’ (Karnataka Ratna) ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಅಪ್ಪುಗೆ ಈ ಗೌರವ ಸಲ್ಲುತ್ತಿರುವುದು ಖುಷಿಯ ವಿಚಾರ. ಈ ಪ್ರಶಸ್ತಿಗೆ ಅವರು ಅರ್ಹರು. ಪುನೀತ್​ ರೀತಿ ಜನಪ್ರಿಯತೆ ಹೊಂದಿರುವ ಬೇರೊಬ್ಬ ನಟ ಇಲ್ಲ. ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದಂತಹ ಛಾಪು ಮೂಡಿಸಿದ್ದರು. ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವ ಕರ್ನಾಟಕ ಸರ್ಕಾರಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ’ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

TV9 Kannada


Leave a Reply

Your email address will not be published.