
ಪ್ರಾತಿನಿಧಿಕ ಚಿತ್ರ
KSEEB Result 2022: sslc.karnataka.gov.in ವೆಬ್ಸೈಟ್ ಓಪನ್ ಆಗದ ಕಾರಣ Karresults.nic.in ಈ ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ.
ಬೆಂಗಳೂರು: 2021-22ನೇ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ ಎಂದು ಪ್ರಾಥಮಿಕ & ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. sslc.karnataka.gov.in ವೆಬ್ಸೈಟ್ ಓಪನ್ ಆಗದ ಕಾರಣ Karresults.nic.in ಈ ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ. 8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 8,07,206 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. 8,53,436 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟು 7,30,881 ವಿದ್ಯಾರ್ಥಿಗಳು ಉತ್ತೀರ್ಣವಾಗಿದ್ದಾರೆ. ಶೇಕಡಾ 85.53ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದು ಹೇಳಿದ್ದಾರೆ.
145 ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕಗಳನ್ನು ಪಡೆದುಕೊಂಡಿದ್ದಾರೆ. ಎರಡು ವರ್ಷ ಕೊವಿಡ್ ಕಾರಣಕ್ಕೆ ಪೂರ್ಣ ಪ್ರಮಾಣದಲ್ಲಿ ಎಕ್ಸಾಂ ನಡೆದಿರಲಿಲ್ಲ. 85.63% ಉತ್ತೀರ್ಣರಾಗಿದ್ದಾರೆ. ಕಳೆದ ಹತ್ತು ವರ್ಷದಲ್ಲಿ ದಾಖಲೆಯ ಫಲಿತಾಂಶವಾಗಿದೆ. 3,720279 – 90.29 ಬಾಲಕಿಯರು ಉತ್ತೀರ್ಣರಾಗಿದ್ದಾರೆ. ಬಾಲಕರು – 81.3%, ಒಟ್ಟು ಗ್ರೇಸ್ ಅಂಕಗಳ ಮೂಲಕ ಪಾಸ್ ಆಗಿದ್ದಾರೆ. 40061 ವಿದ್ಯಾರ್ಥಿಗಳು, ಗ್ರೇಸ್ ಅಂಕಗಳ ಮೂಲಕ ಅಧಿಕ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.