
Image Credit source: Hindustan Times
080-46110007 ಸಂಖ್ಯೆಗೆ ಕರೆ ಮಾಡಿ ವಿದ್ಯಾರ್ಥಿಗಳು ಸಲಹೆ ಪಡೆಯಬಹುದು. ಸಹಾಯವಾಣಿ ಮೂಲಕ ವಿದ್ಯಾರ್ಥಿಗಳಿಗೆ ಟೆಲಿ ಕೌನ್ಸಿಲಿಂಗ್ ಮಾಡಲಾಗುತ್ತೆ. ಮಾನಸಿಕ ಆರೋಗ್ಯದ ಬಗ್ಗೆ ನಿಮ್ಹಾನ್ಸ್ ವೈದ್ಯರು ಮಾಹಿತಿ ನೀಡಲಿದ್ದಾರೆ.
ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ ಹಿನ್ನೆಲೆ ಫಲಿತಾಂಶದ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ನಿಮ್ಹಾನ್ಸ್ ಸಹಾಯದೊಂದಿಗೆ ರಾಜ್ಯ ಆರೋಗ್ಯ ಇಲಾಖೆ ಸಹಾಯವಾಣಿ ತೆರೆದಿದೆ. 080-46110007 ಸಂಖ್ಯೆಗೆ ಕರೆ ಮಾಡಿ ವಿದ್ಯಾರ್ಥಿಗಳು ಸಲಹೆ ಪಡೆಯಬಹುದು. ಸಹಾಯವಾಣಿ ಮೂಲಕ ವಿದ್ಯಾರ್ಥಿಗಳಿಗೆ ಟೆಲಿ ಕೌನ್ಸಿಲಿಂಗ್ ಮಾಡಲಾಗುತ್ತೆ. ಮಾನಸಿಕ ಆರೋಗ್ಯದ ಬಗ್ಗೆ ನಿಮ್ಹಾನ್ಸ್ ವೈದ್ಯರು ಮಾಹಿತಿ ನೀಡಲಿದ್ದಾರೆ.
ಆನ್ಲೈನ್ನಲ್ಲಿ ಫಲಿತಾಂಶ ನೋಡುವುದು ಹೇಗೆ? ಇದರ ಮೇಲೆ ಕ್ಲಿಕ್ ಮಾಡಿ
ನಾಳೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ
Karnataka SSLC Result 2022 | ಕರ್ನಾಟಕ SSLC ಫಲಿತಾಂಶ 2022: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು (KSEEB) 10 ನೇ ತರಗತಿ (SSLC) ಫಲಿತಾಂಶವನ್ನು (Result) ನಾಳೆ (ಮೇ 19) ರಂದು ಪ್ರಕಟಿಸಲಿದೆ. SSLC ಫಲಿತಾಂಶ 2022 ಅನ್ನು ಅಧಿಕೃತ ವೆಬ್ಸೈಟ್- sslc.karnataka.gov.in ನಲ್ಲಿ ಪ್ರಕಟಿಸಲಾಗುತ್ತದೆ. ಫಲಿತಾಂಶವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ SSLC ಪರೀಕ್ಷೆಯ ರೋಲ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಬೇಕು. ಕರ್ನಾಟಕ SSLC 2022 ಪರೀಕ್ಷೆಗಳು ಮಾರ್ಚ್ 28 ಮತ್ತು ಏಪ್ರಿಲ್ 11 ರ ನಡುವೆ ನಡೆದವು. ಈ ವರ್ಷ ಸುಮಾರು 8.5 ಲಕ್ಷ ವಿದ್ಯಾರ್ಥಿಗಳು KSEEB 10 ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದರು.